oplus_2 
ಜಿಲ್ಲೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಕಲಾಗದಂತೆ ನೋಡಿಕೊಳ್ಳಿ: ಎಡಿಸಿ ಶಿವಾನಂದ ಸೂಚನೆ

Gangavati - Shashidhara Shashidhara

ರಾಯಚೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅ.26 ಹಾಗೂ 27ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಯಾವುದೇ ಲೋಪದೋಷಗಳಿಲ್ಲದಂತೆ ನಡೆಸಿಕೊಂಡು ಹೋಗುವಂತೆ ಎಡಿಸಿ ಶಿವಾನಂದ ಭಜಂತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರೀಕ್ಷಾ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಮಾತನಾಡಿ, ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಪರೀಕ್ಷೆಗೆ ನಿಯೋಜನೆಗೊಂಡ ಮೇಲ್ವಿಚಾರಕರು ಹಾಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಅ.26ಕ್ಕೆ ಜರುಗಲಿರುವ ಕಡ್ಡಾಯ ಕನ್ನಡ ಪರೀಕ್ಷೆಯ ದಿನದಂದು ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2.30ರಿಂದ ಸಂಜೆ 4.30 ರವರೆಗೆ ಹಾಗೂ ಅ.27ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ದಿನದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 4.30ರವರೆಗೆ ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಿಡಿಪಿಯು ಜಯರಾಮ, ಪ್ರಮುಖರಾದ ಸೋಮಶೇಖರಪ್ಪ ಹೊಕ್ರಾಣಿ, ಎಂ.ಸುಧಾ ಸೇರಿದಂತೆ ಇತರರಿದ್ದರು.