ರಾಯಚೂರು: ಸಮಾಜದಲ್ಲಿ ದಲಿತ ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರದಂತಹ ದೌರ್ಜನ್ಯಗಳು ಜರುಗುತ್ತಿದ್ದು, ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ತಾಲೂಕಾಧ್ಯಕ್ಷ ದುಳ್ಳಯ್ಯ ಗುಂಜಳ್ಳಿ ಹೇಳಿದರು.
ಇದನ್ನೂ ಓದಿ: ನೀರಿಗಾಗಿ ಆಗ್ರಹಿಸಿ ಶಹಾಪುರ ಬಂದ್
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ಹಾಗೂ ಕೊಡೆಕಲ್ ಗ್ರಾಮಗಳಲ್ಲಿ ಮಾದಿಗ ಸಮುದಾಯದ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದೇ ಇರುವುದನ್ನು ಖಂಡಿಸಿ ಸೆ.30ರಂದು ಯಾದಗಿರಿ ಜಿಲ್ಲೆ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜನರ ರಕ್ಷಣೆ ಮಾಡುವಲ್ಲಿ ವಿಫಲವಾಗಿದ್ದು, ಅತ್ಯಾಚಾರ ಘಟನೆ ನಡೆದು 15 ದಿನಗಳಾದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಈ ಬಗ್ಗೆ ಗಮನಕ್ಕಿದ್ದರೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಗೃಹ ಸಚಿವರು ಯಾವುದೇ ಪ್ರತಿಕ್ರಿಯೆ ನಿಡುತ್ತಿಲ್ಲ ಎಂದರು. ಈ ಸಂದರ್ಭದಲ್ಲಿ ಪ್ರಮುಖರಾದ ರಂಜೀತ್, ಸುರೇಶ, ಜಕ್ರಪ್ಪ, ಹನುಮಂತ, ಮಾರುತಿ, ಪ್ರಸಾದ್, ನರಸಿಂಹಲು, ಪ್ರಭು ಸೇರಿದಂತೆ ಇತರರಿದ್ದರು.