ರಾಯಚೂರು ಡಿಸಿ ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಕುರುಬ ಸಂಘದಿಂದ ಮನವಿ ಸಲ್ಲಿಸಲಾಯಿತು. 
ಜಿಲ್ಲೆ

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಿ

ರಾಯಚೂರು: ಕಲಬುರಗಿ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕುರುಬ ಸಂಘದಿಂದ ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಆಳಂದ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ಈ ಕೃತ್ಯ ಎಸಗಿರುವುದು ಅತ್ಯಂತ ಹೀನಾಯ. ಘಟನೆಯಿಂದ ಸಮಾಜವೇ ತಲೆ ತಗ್ಗಿಸುವಂತಾಗದೆ. ಆರೋಪಿಯನ್ನು ತಕ್ಷಣವೇ ಬಂಧಿಸಿ, ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಲಾಯಿತು. ತಾಲೂಕಾಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ರಮೇಶ ಉಪ್ರಾಳ್, ಪದಾಧಿಕಾರಿಗಳಾದ ನರಸಿಂಹಲು, ರಾಮನಗೌಡ, ಸೇರಿದಂತೆ ಇನ್ನಿತರರಿದ್ದರು.