ರಾಯಚೂರು: ಕೆರೆಯಲ್ಲಿ ಕಾಲುಜಾರಿ ಬಿದ್ದು ತಾಯಿ ಮತ್ತು ಮಗ ಸಾವನಪ್ಪಿರುವ ಘಟನೆ ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಮಲಿಯಾಬಾದ್ ಗ್ರಾಮದ ಸಂಜು(7) ಹಾಗೂ ರಾಧಮ್ಮ(27)ಮೃತರು. ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ಬಾಲಕ ಕೆರೆಯಲ್ಲಿ ಕಾಲುಜಾರಿ ಬಿದ್ದಿದ್ದು, ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ನೀರು ಪಾಲಾಗಿದ್ದಾರೆ. ಈ ಕುರಿತು ಯರಗೇರಾ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.