ಸಂಗೋಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಕುರುಬರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.  
ಜಿಲ್ಲೆ

ಪುಂಡರನ್ನು ಗಡಿಪಾರು ಮಾಡಲು ಜಿಲ್ಲಾ ಕುರುಬರ ಸಂಘ ಒತ್ತಾಯ

Raichur

ರಾಯಚೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಸ್ವಾತಂತ್ರೃ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿರುವ ಶಿವಸೇನೆ, ಎಂಇಎಸ್‌ಅನ್ನು ರಾಜ್ಯದಲ್ಲಿ ನಿಷೇಧಿಸಿ, ನಾಡದ್ರೋಹಿಗಳನ್ನು ಗಡಿಪಾರು ಮಾಡಬೇಕು ಎಂದು ಜಿಲ್ಲಾ ಕುರುಬರ ಸಂಘ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿತು. ಪ್ರತಿಮೆ ಧ್ವಂಸಗೊಳಿಸಿದವರನ್ನು ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮತು ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿತು.

ನೆಲ, ಜಲ, ಭಾಷೆ ವಿಚಾರವಾಗಿ ನಿರಂತರವಾಗಿ ತಗಾದೆ ತೆಗೆದು ಪುಂಡಾಟಿಕೆ ನಡೆಸುವ ಮೂಲಕ ಕನ್ನಡಗಿರ ತಾಳ್ಮೆ ಪರೀಕ್ಷಿಸಲಾಗುತ್ತಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಇಂತಹ ಘಟನೆ ನಡೆದಿರುವುದು ದುರಷ್ಟಕರ. ಬೆಳಗಾವಿಯಲ್ಲಿ ಪುಂಡರ ಹಾವಳಿ ತಡೆಗೆ ಕಠಿಣ ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದಯುತ ವಾತಾವರಣ ನಿರ್ಮಾನ ಮಾಡಲು ಸರ್ಕಾರ ಮುಂದಾಗಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.