ಜಿಲ್ಲೆ

ಶಾಲೆಗಳಲ್ಲಿ ಮೂಲ ಸೌಕರ್ಯಕ್ಕೆ ಕ್ರಮ

ಶಾಮಸುಂದರ್ ಕೊಪ್ಪಳಕರ್

ರಾಯಚೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಹೇಳಿದರು.

ಅರಸಿಗೇರಾ, ಬುರ್ದಿಪಾಡ, ವಡ್ಡೆಪಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.ಗ್ರಾಮಸ್ಥರಿಗೆ ಶುದ್ಧ ಕುಡಿವ ನೀರು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಲಾಗಿದೆ. ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಅರಸಿಗೇರಾ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿ, ಬುರ್ದಿಪಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಕೆಆರ್‌ಡಿಬಿ ಅನುದಾನದಡಿ ಎರಡು ಕೊಠಡಿ ನಿರ್ಮಾಣ ಹಾಗೂ ವಡ್ಡೆಪಲ್ಲಿಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.