ಜಿಲ್ಲೆ

ನಗರದಲ್ಲಿ ಎರಡು ದಿನ ಸಂಗೀತ ಸಮ್ಮೇಳನ: ಚಿನ್ನಯ್ಯ ಸ್ವಾಮಿ

ರಾಯಚೂರು: ಡಾ.ಪಂ.ಪುಟ್ಟರಾಜ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಪುಟ್ಟರಾಜ ಗವಾಯಿಗಳ 14ನೇ ಪುಣ್ಯಸ್ಮರಣೆ ಅಂಗವಾಗಿ ನಗರದಲ್ಲಿ ಸಂಗೀತ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಖಜಾಂಚಿ ಪಿ.ಚಿನ್ನಯ್ಯ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಸೆ.28 ಹಾಗೂ 29ರಂದು ನಗರದ ಸೋಮವಾರಪೇಟೆ ಹಿರೆಮಠದಲ್ಲಿ 2 ದಿನ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕಲಾವಿದರಿಂದ ಸಂಗೀತ ಸಮ್ಮೇಳನ ನಡೆಯಲಿದೆ ಎಂದರು.

ಕಾರ್ಯಕ್ರಮದ ಸಾನಿಧ್ಯವನ್ನು ಸೋಮವಾರಪೇಟೆ ಹಿರೆಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಂಗಳವಾರಪೇಟೆ ಹಿರೆಮಠದ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಕವಿಗಳು, ಸಾಹಿತಿಗಳು, ಸಂಘ ಸಂಘಟನೆಯ ಮುಖಡರು ಇರಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಜಾಲಿಬೆಂಚಿ ಈರಣ್ಣ, ರಘುಪತಿ, ಬಸಣ್ಣ, ವಿಜಯಕುಮಾರ್, ಸಿದ್ದಯ್ಯ ಸೇರಿದಂತೆ ಇತರರಿದ್ದರು.