ರಾಯಚೂರಿನಲ್ಲಿ ಅಂಬಿಗರ ಚೌಡಯ್ಯ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್ ಶುಕ್ರವಾರ ಮಾಲಾರ್ಪಣೆ ಮಾಡಿದರು. 
ಜಿಲ್ಲೆ

ನಿಜಶರಣ ಅಂಬಿಗರ ಚೌಡಯ್ಯ ಸ್ಮರಣೆ

ರಾಯಚೂರು: ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು. ವೃತ್ತದಲ್ಲಿನ ಅಂಬಿಗರ ಚೌಡಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು. ಸಂಸದ ರಾಜಾ ಅಮರೇಶ್ವರ ನಾಯಕ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ನಗರಸಭೆ ಅಧ್ಯಕ್ಷ ಇ.ವಿನಯಕುಮಾರ, ಜಿಲ್ಲಾಧಿಕಾರಿ ಡಾ.ಅವಿನಾಶ ಮೆನನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಗಂಗಾಮತಸ್ಥ ಸಮುದಾಯದ ಪ್ರಮುಖರಾದ ಕೆ.ಶಾಂತಪ್ಪ, ಕೆ.ಶರಣಪ್ಪ, ಶರಣಪ್ಪ ಕಡಗೋಲ, ಮುಖಂಡರಾದ ಬಾಬುರಾವ್, ರವೀಂದ್ರ ಜಲ್ದಾರ್, ಮುಕ್ತಿಯಾರ್ ಇದ್ದರು.