ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.  
ಜಿಲ್ಲೆ

ಶೇ.40 ವೇತನ ಹೆಚ್ಚಳ ಮಾಡಿ

ಶಶಿಧರ ಎಲ್

ರಾಯಚೂರು: ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಸಂಘದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು. 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿ, ಶೇ.40 ವೇತನ ಹೆಚ್ಚಳ ಮಾಡಬೇಕು. ರಾಜ್ಯದಲ್ಲಿ ಖಾಲಿಯಿರುವ ಸುಮಾರು 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಆಡಳಿತ ಸುಧಾರಣೆ ನೆಪದಲ್ಲಿ ಶಿಫಾರಸು ಮಾಡಲಾಗಿರುವ ಹುದ್ದೆಗಳ ಕಡಿತವನ್ನು ಮತ್ತು ಸರ್ಕಾರಿ ಸೇವೆಗಳ ಖಾಸಗೀಕರಣ ಕೈಬಿಡಬೇಕು. ಎಸ್ಸಿ, ಎಸ್ಟಿ ನೌಕರರಿಗೆ ಸಂವಿಧಾನದತ್ತವಾಗಿ ಸಿಗಬೇಕಾದ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಶಿಕ್ಷಕರ ವರ್ಗಾವಣೆ ಸಮಸ್ಯೆಗಳನ್ನು ಬಗೆಹರಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳ ರಚನೆ, ಸರ್ಕಾರಿ ಶಾಲೆಗಳನ್ನು ಮುಚ್ಚುವುದು, ಶಿಕ್ಷಕರ ಹುದ್ದೆಗಳನ್ನು ಕಡಿತಗೊಳಿಸುವುದನ್ನು ಕೈಬಿಡಬೇಕು. ಸಾರ್ವಜನಿಕ ಉದ್ದಿಮೆಗಳ ಹಾಗೂ ನಿಗಮ, ಮಂಡಳಿಗಳ ಸೇವೆಗಳ ಖಾಸಗೀಕರಣ ಕೈಬಿಡಬೇಕು. ಹೊರಗುತ್ತಿಗೆ, ದಿನಗೂಲಿ, ಅಥಿತಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದರೊಂದಿಗೆ ಎಲ್ಲ ನೇರ ನೇಮಕಾತಿಯಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಲಾಯಿತು.