ಜಿಲ್ಲೆ

ಪಿಡಿಒಗಳ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ: ಅಣ್ಣಾರಾವ್

Gangavati - Shashidhara Shashidhara

ರಾಯಚೂರು: ಗ್ರಾಮ ಪಂಚಾಯತಿಗಳ ಚುನಾಯಿತ ಅಭ್ಯರ್ಥಿಗಳು, ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳ ಕಾರ್ಯ ನಿರ್ವಹಣೆಗಳಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಕರ್ನಾಟಕ ರಾಜ್ಯ ಪಿಡಿಒ ಸಂಘದ ಜಿಲ್ಲಾ ಗೌರವಾಧ್ಯಕ್ಷ ಅಣ್ಣರಾವ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಠಾವಧಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪಂಚಾಯತಿ ಕಾರ್ಯ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ. ಸರ್ಕಾರ ಪರಿಹಾರ ನಿಡಿದೇ ಸಮಸ್ಯೆಗಳಿಗೆ ಪಿಡಿಒ ಹಾಗೂ ಪಂಚಾಯತ್ ಸಿಬ್ಬಂದಿಗಳನ್ನು ನೇರ ಹೋನೆಗಾರರನ್ನಾಗಿ ಮಾಡುತ್ತಿರುವುದು ಖಂಡನೀಯ ಎಂದರು.

ಪಂಚಾಯತಿಗಳಲ್ಲಿರುವ ಸಮಸ್ಯೆಗಳಿಂದ ಗ್ರಾಮ ಹಾಗೂ ವಾರ್ಡ್ ಸಭೆಗಗಳನ್ನು ಮಾಡಿ ಜನರ ಬೇಡಿಕೆಗನುಸಾರ ಯೋಜನೆಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುವ ಜವಾನ, ಕರವಸೂಲಿಗಾರ, ಪಂಪ್ ಆಪರೇಟರ್‌ಗಳಿಗೆ ಕನಿಷ್ಠ ವೇತನ ನೀಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಗ್ರೂಪ್ ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಬೇಕು ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ತಾಯಣ್ಣ, ಭೀಮರೆಡ್ಡಿ, ರೇಖಾ, ರವಿ, ಲಕ್ಷ್ಮೀರೆಡ್ಡಿ, ಶ್ರೀಧರ, ಮಲ್ಲಿಕಾರ್ಜುನ, ಗುರುಪ್ರಸಾದ್ ಸೇರಿದಂತೆ ಇತರರಿದ್ದರು.