ರಾಯಚೂರು: ಸಿ.ಪುಟ್ಟರಂಗಶೆಟ್ಟಿ ಸತತವಾಗಿ ನಾಲ್ಕನೇ ಬಾರಿಗೆ ಶಾಸಕರಾಗಿದ್ದು, ಸರ್ಕಾರ ಸಚಿವ ಸಂಪುಟದಲ್ಲಿ ಅವರನ್ನು ಮಂತ್ರಿಯನ್ನಾಗಿ ನೇಮಕ ಮಾಡಬೇಕೆಂದು ಜಿಲ್ಲಾ ಭಗೀರಥ ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಎನ್.ಬುಗ್ಗಾರೆಡ್ಡಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಚಾಮರಾಜನಗರ ದಲ್ಲಿ ಅನೇಕ ವರ್ಷಗಳಿಂದ ಶಾಸಕರಾಗಿ ಜನಪ್ರಿಯತೆಯನ್ನು ಗಳಿಸಿರುವ ಹಾಗೂ ಉಪ್ಪಾರ ಸಮಾಜದ ಏಕೈಕ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿಗೆ ಸಂಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಆಧಿರಾಜ ಆದೋನಿ, ಮಾನಿಕ್ಯಪ್ಪ, ದೇವಣ್ಣ ಸೇರಿದಂತೆ ಇತರರಿದ್ದರು.