ಜಿಲ್ಲೆ

ಯುವತಿ ಮೇಲೆ ಅತ್ಯಾಚಾರ ನಡೆಸಿದವರನ್ನು ಗಲ್ಲಿಗೇರಿಸಿ

ರಾಯಚೂರು: ಉತ್ತರಪ್ರದೇಶದಲ್ಲಿ ಹಾಥರಸ್‌ನಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ದಸಂಸದಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತ ಕುಮಾರ್‌ಗೆ ಮನವಿ ಸಲ್ಲಿಸಿ, ಯುವತಿ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಉತ್ತರ ಪ್ರದೇಶದಲ್ಲಿ ದಲಿತರು, ಮಹಿಳೆಯರು ಹಾಗೂ ಬಡ ಜನರ ಜೀವನಕ್ಕೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸಮಿತಿ ಪದಾಧಿಕಾರಿಗಳಾದ ಎಂ.ವಸಂತಕುಮಾರ, ಎಸ್.ಪ್ರಸಾದ್, ಎಂ.ಈರಣ್ಣ, ರವೀಂದ್ರನಾಥ ಪಟ್ಟಿ, ಲಕ್ಷ್ಮಿದೇವಿ, ಶಾಂತರಾಜ್, ಶಿವಪ್ಪ ವಂದಲಿ, ಉರುಕುಂದಮ್ಮ, ಸಾವಿತ್ರಿ, ಎಂ.ಶರಣಬಸವ, ಅನಿಲ್‌ಕುಮಾರ ಹಾಗೂ ಇತರರಿದ್ದರು.