ರಾಯಚೂರು: ಶಿಕ್ಷಣದ ಉಳಿವಿಗಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಎಸ್‌ಎಫ್‌ಐನಿಂದ ಹಮ್ಮಿಕೊಂಡಿರುವ ಜಾಗೃತಿ ಜಾಥಾ ಬುಧವಾರ ನಗರಕ್ಕೆ ಆಗಮಿಸಿತು. ಬಸವೇಶ್ವರ ವೃತ್ತದಲ್ಲಿ ಜಾಥಾವನ್ನು ಸ್ವಾಗತಿಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದ ಮೇಲೆ ದಾಳಿ ನಡೆಸಿದೆ. ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಸರ್ಕಾರ ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಹುನ್ನಾರ ನಡೆಸಿದೆ. ಗುಣಮಟ್ಟದ ಶಿಕ್ಷಣ ಮತ್ತು ಸಮಗ್ರ ಶಿಕ್ಷಣದ ಅಭಿವೃದ್ಧಿ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಜಿಲ್ಲಾ ಕ್ರೀಡಾಂಗಣದವರೆಗೆ ನಡೆದ ಜಾಥಾದಲ್ಲಿ ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ವಿ.ಪಿ.ಸಾನು, ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣ, ರಾಜ್ಯಾಧ್ಯಕ್ಷ ಅಮರೇಶ ಕಡಗದ, ಕಾರ್ಯದರ್ಶಿ ವಾಸುದೇವ ರೆಡ್ಡಿ, ಪದಾಧಿಕಾರಿಗಳಾದ ಶಿವಕುಮಾರ ಮ್ಯಾಗಳಮನಿ, ರಮೇಶ ಮೀರಾಪುರ, ಭೀಮನಗೌಡ ಸುಂಕೇಶ್ವರಾಳ, ಚಿದಾನಂದ ಕರಿಗೂಳಿ, ಕೆ.ಜಿ.ವೀರೇಶ, ಕರಿಯಪ್ಪ ಅಚ್ಚೊಳ್ಳಿ ಇದ್ದರು.