ರವೀಂದ್ರನಾಥ ಪಟ್ಟಿ 
ಜಿಲ್ಲೆ

ವಿದ್ಯಾರ್ಥಿಗಳ ಪ್ರೋತ್ಸಾಹಧನ ಹೆಚ್ಚಿಸಿ: ರವೀಂದ್ರನಾಥ ಪಟ್ಟಿ

Gangavati - Shashidhara Shashidhara

ರಾಯಚೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿತವನ್ನು ಕಾಪಾಡದೇ ಜನರಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದ್ದು, ಸಮಾಜದ ಹಿತವನ್ನು ಕಾಪಾಡದ ಸರ್ಕಾರದ ನಡೆ ಖಂಡನೀಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಕೋರ್ ಕಮಿಟಿ ಸದಸ್ಯ ರವೀಂದ್ರನಾಥ ಪಟ್ಟಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಂಗಳವಾರ ಮಾತನಾಡಿ, ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ದಲಿತ ಸಂಘಟನೆಗಳು ಬೆಂಬಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿವೆ. ಆದರೆ ಕಾಂಗ್ರೆಸ್ ಸರ್ಕಾರದಿಂದ ಎಸ್‌ಸಿಪಿ, ಟಿಎಸ್‌ಪಿ ಮೀಸಲು ಹಣವನ್ನು ಬೇರೆ ಉದ್ದೇಶಕ್ಕಾಗಿ ಬಳಸಿಕೊಂಡು ಜತೆಗೆ ವಿದ್ಯಾರ್ಥಿಗಳ ವೇತನದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ನಿಡಲಾಗುವ ಪ್ರೋತ್ಸಹದನ್ನು ನಿಲ್ಲಿಸುವ ತೀರ್ಮಾನ ಕೈಗೊಂಡಿದ್ದು, ಕೂಡಲೇ ವಿದ್ಯಾರ್ಥಿ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು. ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗಿದ್ದು, ಕೂಡಲೇ ಹಣವನ್ನು ಹಿಂಪಡೆದು ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಬಳಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ  ಸಮಿತಿಯ ಜಿಲ್ಲಾ ಸಂಚಾಲಕ ರಾಜುಪಟ್ಟಿ, ಆರ್‌ಟಿಐ ಕರ್ನಾಟಕ ಜಿಲ್ಲಾಧ್ಯಕ್ಷ ಅಯ್ಯಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಮೌನೇಶ್ ಕೋರಿ, ತಾಲೂಕು ಸಂಚಾಲಕ ಗಂಗಾಧರ, ಪ್ರಮುಖರಾದ ಚಂದ್ರಶೇಖರ್, ಯಲ್ಲಪ್ಪ, ಪ್ರಸಾದ್, ಪರಶುರಾಮ್ ಸೇರಿದಂತೆ ಇತರರಿದ್ದರು.