ಜಿಲ್ಲೆ

ಅದ್ದೂರಿಯಾಗಿ ಜರುಗಿದ ಸಿದ್ದಲಿಂಗೇಶ್ವರ ಜಾತ್ರೆ

ರಾಯಚೂರು: ತಾಲೂಕಿನ ಮನ್ಸಲಾಪುರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರಥೋತ್ಸವವು ಭಾನುವಾರ ಅದ್ದೂರಿಯಾಗಿ ಜರುಗಿತು.

ಜಾತ್ರೆಯ ಹಿನ್ನೆಲೆ ಐದು ದಿನಗಳಿಂದ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ರಥೋತ್ಸವ ದಿನದಂದು ಬೆಳಿಗ್ಗೆ ವಿಶೇಷ ಪೂಜೆ, ಮಹಾಮಂಗಳಾರತಿ, ಶ್ರೀ ಸಿದ್ದಲಿಂಗೇಶ್ವರ ದೇವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆ ಮಾಡಲಾಯಿತು.

ಸಂಜೆ ವಿವಿಧ ವಾದ್ಯಮೇಳಗಳೊಂದಿಗೆ ಸುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ರಥವನ್ನು ಎಳೆದು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸುಲ್ತಾನಪುರ ಬೃಹನ್ಮಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಪ್ರಮುಖರಾದ ರವಿಪಾಟೀಲ್, ಚನ್ನಬಸವ, ಸಿದ್ದಪ್ಪಗೌಡ ಮಾಲೀಪಾಟೀಲ್, ಮಲ್ಲಿಕಾರ್ಜುನಗೌಡ ಮಾಲೀಪಾಟೀಲ್, ಪಾಲಾಕ್ಷಿಗೌಡ ಸೇರಿದಂತೆ ಇತರರಿದ್ದರು.