ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಎಬಿವಿಪಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.  
ಜಿಲ್ಲೆ

ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಿ

Raichur

ರಾಯಚೂರು: ಗ್ರಾಮೀಣ ಪ್ರದೇಶದಿಂದ ನಗರ ಮತ್ತು ಪಟ್ಟಣ ಪ್ರದೇಶಕ್ಕೆ ಬರುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿಯಿಂದ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವಲ್ಲಿ ಆಗುತ್ತಿರುವ ವಿಳಂಬವನ್ನು ತಪ್ಪಿಸಿ, ಶೀಘ್ರಗತಿಯಲ್ಲಿ ಪಾಸ್ ವಿತರಿಸಬೇಕು. ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನಲ್ಲಿ ಶೌಚಾಲಯ, ಗ್ರಂಥಾಲಯ ಹಾಗೂ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಶೀಘ್ರ ಕ್ರಮಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.