oplus_2 
ಜಿಲ್ಲೆ

ಆತ್ಮಹತ್ಯೆ ತಡೆಯಲು ಜಾಗೃತಿ ಅಗತ್ಯ: ನ್ಯಾಯಾಧೀಶ ಎಚ್.ಎ.ಸಾತ್ವಿಕ್

Gangavati - Shashidhara Shashidhara

ರಾಯಚೂರು: ಜೀವನದಲ್ಲಿರುವ ಸಮಸ್ಯೆಗಳಿಗೆ ಅಮುಲ್ಯವಾದ ಜೀವವನ್ನು ಬಲಿಕೊಡುವುದು ಸರಿಯಲ್ಲ. ಆತ್ಮಹತ್ಯೆ ದೊಡ್ಡ ಪಾಪವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಚ್.ಎ ಸಾತ್ವಿಕ್ ಹೇಳಿದರು.

ನಗರದ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗುರುವಾರ ಮಾತನಾಡಿದರು.

ಪ್ರಸ್ತುತ ದಿನಮಾನಗಳಲ್ಲಿ ಸಮಸ್ಯೆಗಳನ್ನು ಸಹಿಸಿಕೊಳ್ಳದೇ, ಆವೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡು ಅಮುಲ್ಯವಾದ ಬದುಕನ್ನು ಹಾಳು ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಯುವಕರು ದುಡುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಯುವಕರಲ್ಲಿ ಆತ್ಮಹತ್ಯೆಯ ಕುರಿತು ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.

ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಮುಖ್ಯ ಕಾರಣವಾಗುತ್ತದೆ ಆದ್ದರಿಂದ ಮಾನಸಿಕವಾಗಿ ಕುಗ್ಗಿರುವ ವ್ಯಕ್ತಿಗಳಿಗೆ ದೈರ್ಯ ತುಂಬುವ ಕೆಲಸವನ್ನು ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆತ್ಮಹತ್ಯೆಗೆ ಮಾದಕ ವಸ್ತುಗಳ ಬಳಕೆಯೂ ಕಾರಣವಾಗುತ್ತದೆ ಆದ್ದರಿಂದ ಮಾದಕ ವಸ್ತುಗಳ ಬಳಕೆಯಿಂದ ಯುವಕರು ದೂರವಿರುವಂತೆ ಸಲಹೆ ನೀಡಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿಲ್ಲ ಹಾಗೂ ಅನುತ್ತೀರ್ಣರಾಗಿರುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆಗಳಿಗೆ ಈ ನಿಟ್ಟಿನಲ್ಲಿ ಪೋಷಕರು ಮಕ್ಕಳನ್ನು ಬೈಯದೇ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೆ.ಗಣೇಶ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಮಾನಸಿಕ ರೋಗ ತಜ್ಞ ಮನೋಹರ ಪತ್ತಾರ್, ನವೋದಯ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಬಿ.ದೇವಾನಂದ ಪ್ರಮುಖರಾದ ಡಾ.ಯಶೋದಾ ಸೇರಿದಂತೆ ಇತರರಿದ್ದರು.