ಜಿಲ್ಲೆ

ದ್ವಿಚಕ್ರ ವಾಹನ ಸಂಚಾರಕ್ಕೆ ಹೆಲ್ಮೆಟ್ ಕಡ್ಡಾಯ

ರಾಯಚೂರು: ಕಳೆದ ಮೂರು ವರ್ಷಗಳಲ್ಲಿ ಜ್ಲಿಲೆಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಅತಿ ಹೆಚ್ಚಾಗಿ ಬೈಕ್ ಸವಾರರು ಮೃತಪಟ್ಟಿರುವುದರಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಈಗಾಗಲೇ ಚಾಲ್ತಿಯಲ್ಲಿರುವ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಕ್ರಮಕ್ಕೆ ಮುಂದಾಗಿದೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ನ.1ರಿಂದ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಾಗಿದೆ. ನಿಯಮ ಮೀರಿದ್ದಲ್ಲಿ ಪೊಲೀಸರು ಸೂಕ್ತ ಕಾನೂನು ಕ್ರಮ ಜರುಗಿಸುವರು ಮತ್ತು ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ.

ಸಾರ್ವಜನಿಕರ ಅಮುಲ್ಯವಾದ ಜೀವವನ್ನು ರಕ್ಷಿಸಲು ಪೊಲೀಸ್ ಇಲಾಖೆ ಈ ಕ್ರಮಕ್ಕೆ ಮುಂದಾಗಿದ್ದು, ನಾಳೆಯಿಂದ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ದಂಡದ ಚುರುಕು ಮುಟ್ಟಿಸಲು ಪೊಲೀಸ್ ಇಲಾಖೆ ತಯಾರಿ ನಡೆಸಿದೆ. 

ಸಾರ್ವಜನಿಕರ ಅಮೂಲ್ಯವಾದ ಜೀವವನ್ನು ರಕ್ಷಿಸುವ ಹಿತದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಈ ನಿಯಮ ಉಲ್ಲಂಘಿಸಿ ವಾಹನಗಳನ್ನು ಚಲಾಯಿಸಿದ್ದಲ್ಲಿ ಕಾನೂನು ಕ್ರಮವನ್ನು ಜಗಿಸಲಾಗುವುದು. - ಎಂ.ಪುಟ್ಟಮಾದಯ್ಯ, ಎಸ್ಪಿ ರಾಯಚೂರು. ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿಯ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವು ಸಂಭವಿಸುತ್ತಿವೆ. ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. - ಕೆ.ನಿತೀಶ, ಡಿಸಿ ರಾಯಚೂರು.