ರಾಯಚೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ರಾಜ್ಯ ಉಪ್ಪಾರ ಮಹಾಸಭಾದಿಂದ ಬುಧವಾರ ಮನವಿ ಸಲ್ಲಿಸಲಾಯಿತು.  
ಜಿಲ್ಲೆ

ಉಪ್ಪಾರ ಸಮುದಾಯ ಪರಿಶಿಷ್ಟ ಸಮುದಾಯಕ್ಕೆ ಸೇರಿಸಿ

Raichur

ರಾಯಚೂರು: ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಕರ್ನಾಟಕ ಉಪ್ಪಾರ ಮಹಾಸಭಾದಿಂದ ಬುಧವಾರ ಮನವಿ ಸಲ್ಲಿಸಲಾಯಿತು.

ಉಪ್ಪಾರ ಸಮುದಾಯ ರಾಜ್ಯದಲ್ಲಿ 50 ಲಕ್ಷಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದ್ದು, ಅತ್ಯಂತ ಹಿಂದುಳಿದ ಜಾತಿಯಾಗಿದೆ. ಸಮುದಾಯವನ್ನು ಪ.ಜಾ, ಪ.ಪಂಕ್ಕೆ ಸೇರಿಸುವಂತೆ ಹಲವಾರು ವರ್ಷಗಳಿಂದ ಹೋರಾಟಗಳು ನಡೆಯುತ್ತ ಬಂದಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಸಮುದಾಯವು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದು, ಅಭಿವೃದ್ಧಿಗಾಗಿ ಎಸ್ಸಿ ಅಥವಾ ಎಸ್ಟಿಗೆ ಸೇರ್ಪಡೆ ಮಾಡುವುದು ಅತ್ಯಂತ ಅವಶ್ಯಕ. ಈಗಾಗಲೇ ಉಪ್ಪಾರ ಸಮುದಾಯದ ಉಪಜಾತಿಗಳಾದ ಕೂಸರು, ಮಂಡಾಲರು, ಭಟದಾ ಮತ್ತು ಮಹರಾ ಜಾತಿಗಳು ಕಾರವಾರ, ಮಂಗಳೂರು ಹಾಗೂ ಉಡುಪಿ ಭಾಗಗಳಲ್ಲಿ ವಾಸಿಸುತ್ತಿದ್ದು, ಈ ಜಾತಿಗಳನ್ನು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಸೇರಿಸಿದೆ. ಆದರೆ ಉಪ್ಪಾರ ಜಾತಿಯನ್ನು ಸೇರಿಸಲು ವಿಳಂಬ ಮಾಡುತ್ತಿದೆ ಎಂದು ದೂರಿದರು.

ಸಂಘದ ಉಪಾಧ್ಯಕ್ಷೆ ಬಿ.ಎಸ್.ಮಾಲತಿ, ಜಿಲ್ಲಾ ಉಪಾಧ್ಯಕ್ಷೆ ಬಿ.ಲತಾ, ಜಂಟಿ ಕಾರ್ಯದರ್ಶಿ ಶ್ರಾವಣಿ, ಖಜಾಂಚಿ ಸಂಧ್ಯಾ, ಸಂಘಟನಾ ಕಾರ್ಯದರ್ಶಿ ಆದಿಲಕ್ಷ್ಮೀ, ಪದಾಧಿಕಾರಿಗಳಾದ ಜಯಶ್ರೀ, ಚೇತನಾ, ಅನಸೂಯಾ ಇದ್ದರು.