ರಾಯಚೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲ ವೃಂಧದ ಸಂಘಗಳು ಹಾಗೂ ಗ್ರಾ.ಪಂ ಸದಸ್ಯರ ಒಕ್ಕೂಟದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ನಡೆಸಲಾಗುತ್ತಿರುವ ಅನಿರ್ಧಿಷ್ಠಾವದಿ ಧರಣಿ ಭಾಗವಾಗಿ ಗುರುವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಯನ್ನು ಗೆಜಿಟೆಡ್ ಗ್ರೂಪ್-ಬಿ ಗೆ ಮೇಲ್ದರ್ಜೆಗೇರಿಸಬೇಕು. ಏಳು ವರ್ಷಗಳ ಅವಧಿ ಪೂರೈಸಿರುವ ಪಿಡಿಒಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡಬೇಕು ಜತೆಗೆ ವರ್ಗಾವಣೆ ಮಾಡುವ ಮುನ್ನ ಪಿಡಿಒಗಳ ಸಂಘದ ಸಲಹೆಯನ್ನು ಪಡೆಯಬೇಕು ಎಂದು ಆಗ್ರಹಿಸಲಾಯಿತು.
ಪಂಚಾಯತ್ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಕೂಡಲೇ ಅಂತಿಮಗೊಳಿಸಿ ಬಡ್ತಿ ನೀಡಲು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಉದ್ಯೋಗ ಖಾತ್ರಿ(ಎಂಜಿಎನ್‌ಆರ್‌ಇಜಿಎ) ಯೋಜನೆಯನ್ನು ಅನುಷ್ಠಾನಪಡಿಸಲು ಗುರಿ ನಿಗದಿ ಪಡಿಸಿರುವುದನ್ನು ಕೈಬಿಡಬೇಕು ಎಂದು ಘೊಷಣೆಗಳ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಅಣ್ಣಾರಾವ್, ಮಲ್ಲಿಕಾರ್ಜುನ, ಲಿಂಗಪ್ಪ, ರವಿ, ಬಸವರಾಜ್ ಸೇರಿದಂತೆ ಇತರರಿದ್ದರು.