ರಾಯಚೂರಿನ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಾಮೂಹಿಕ ಯೋಗ ಕಾರ್ಯಕ್ರಮಕ್ಕೆ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ಸಿಂಗ್ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಜಿಲ್ಲಾ ಆಯಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಪಾಟೀಲ, ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಇದ್ದರು. 
ರಾಯಚೂರು

12ನೇ ಅಂತರಾಷ್ಟ್ರೀಯ ಯೋಗ ದಿನದ ಸಂಭ್ರಮ ಯೋಗಕ್ಕೆ ಕೆಲ ಸಮಯ ಮೀಸಲಿಡಬೇಕು: ಬಿ.ವೆಂಕಟ ಸಿಂಗ್

ರಾಯಚೂರು
ಯೋಗವು ಶರೀರಕ್ಕೆ ಆರೋಗ್ಯವನ್ನು, ಮನಸ್ಸಿಗೆ ಆನಂದವನ್ನು ಕೊಟ್ಟು, ಕ್ರಿಯಾಶೀಲವಾಗಿರಲು ದಿವ್ಯ ಔಷಧವಾಗಿದೆ. ಒತ್ತಡದ ಜೀವನದ ಮಧ್ಯೆ ಈ ಸಾಧನೆಗೆ ದಿನದ ಕನಿಷ್ಠ ಕೆಲ ಸಮಯ ಮೀಸಲಿಡಬೇಕೆಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬಿ.ವೆಂಕಟ್ಸಿಂಗ್ ಹೇಳಿದರು.

ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಆಯುಷ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಸಾಮೂಹಿಕ ಯೋಗ ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿದರು.
ಯೋಗ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಸಾಧನವಾಗಿದ್ದು, ವಿದ್ಯಾರ್ಥಿಗಳಿಂದ ಹಿಡಿದು ನೌಕರರವರಿಗೆ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಪತ್ರಿ ದಿನ ಯೋಗ ಮಾಡುವ ಮೂಲಕ ತಮ್ಮ ಒತ್ತಡ ಜೀವನದಿಂದ ಹೊರಬರಬೇಕು. ಪರೀಕ್ಷೆಯಲ್ಲಿ ಒಳ್ಳೆಯ ಫಲಿತಾಂಶವನ್ನು ಪಡೆಯಬೇಕೆಂದರು.
ನಂತರ ಯೋಗ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಯೋಗಾಸನಗಳ ಅಭ್ಯಾಸ ಮಾಡಿಸಿದರು.
ಯೋಗ ಶಿಕ್ಷಕರು ವೃಕ್ಷಾಸನ, ಪಾದಹಸ್ತಾಸನ, ತಾಡಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ಅರ್ಧ ಉಷ್ಟ್ರಾಸನ, ಶಶಾಂಕಾಸನ, ಉತ್ತಾನ, ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ಅರ್ಧ ಹಲಾಸನ, ಪವನಮುಕ್ತಾಸನ, ಶವಾಸನ ಹೇಳಿಕೊಟ್ಟರು.

ಯೋಗ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಜಿಲ್ಲಾ ಆಯಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಪಾಟೀಲ, ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಡಿಡಿಪಿಐ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥ ಸ್ಮಿತಾ ಅಕ್ಕ, ಯೋಗ ಶಿಕ್ಷಕ ತಿಮ್ಮಪ್ಪ ವಡ್ಡಿಪಲ್ಲಿ, ಯೋಗ ನ್ಯಾಚೋರೋಪತಿ ವೈದ್ಯಾಧಿಕಾರಿ ಡಾ.ಪೂಜಾ ಸೇರಿದಂತೆ ವಿವಿಧ ಸಂಘ, ಸಂಸ್ಥೆಯ ಮುಖಂಡರು, ವಿದ್ಯಾರ್ಥಿಗಳು, ಸಾರ್ವಜನಿಕರು ಇದ್ದರು.