ತೊಗರಿ  
ರಾಯಚೂರು

20 ತೊಗರಿ ಖರೀದಿ ಕೇಂದ್ರಗಳು ಆರಂಭ

ನರೇಶ್ ಕುಮಾರ್
ಲಿಂಗಸುಗೂರು: ತಾಲೂಕಿನಲ್ಲಿ ತೊಗರಿ ಬೆಳೆದ ರೈತರ ಅನುಕೂಲಕ್ಕಾಗಿ 20 ಖರೀದಿ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣ ತಿಳಿಸಿದ್ದಾರೆ. 
ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ತೊಗರಿಯನ್ನು 8 ಸಾವಿರ ರೂ.ಯಂತೆ ಖರೀದಿಸಲು ತೀರ್ಮಾನಿಸಲಾಗಿದೆ. ಮಾರುಕಟ್ಟೆ ಬೆಲೆಯು ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಇದ್ದು, ತೊಗರಿ ಉತ್ಪನ್ನವು ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಆವಕವಾಗುವ ಸಾಧ್ಯತೆ ಇದೆ. ಹೀಗಾಗಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ಒಟ್ಟು 65 ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚಿನ ಕೇಂದ್ರಗಳನ್ನು ಆರಂಭಿಸಲಾಗುವುದು. 
ಡಿ.17ರಂದು ರೈತರ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಪ್ರತಿ ಎಕರೆಗೆ 4 ಕ್ವಿಂ. ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಖರೀದಿಸಲಾಗುವುದು. ಲಿಂಗಸುಗೂರು ತಾಲೂಕಿನಲ್ಲಿ ಲಿಂಗಸುಗೂರು, ಮುದಗಲ್, ಹಿರೇ ನಗನೂರು, ಹಟ್ಟಿ, ಗೆಜ್ಜಲಗಟ್ಟಾ, ಹೊನ್ನಳ್ಳಿ, ಚಿಕ್ಕ ಹೆಸರೂರು, ಮಾವಿನಬಾವಿ, ಬಯ್ಯಪುರ, ಗೌಡೂರು, ನಾಗಲಾಪುರ, ಗುರುಗುಂಟಾ, ಗುಡದನಾಳ, ಸರ್ಜಾಪುರ, ಮಾಕಾಪುರ, ಆಮದಿಹಾಳ, ಕರಡಕಲ್ಲ, ದೇವರ ಭೂಪೂರ, ಆದಾಪೂರ, ಅನ್ವರಿಯಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ ಎಂದು ಕೃಷ್ಣ ತಿಳಿಸಿದ್ದಾರೆ.