ಮುದಗಲ್: ಪಟ್ಟಣದ ಅಂಬೇಡ್ಕರ್ ವೃತ್ತದ ಸಮೀಪ ರಾಯಚೂರು-ಬಾಗಲಕೋಟೆ ಮಾರ್ಗದಲ್ಲಿ ಸರ್ಕಾರಿ ಬಸ್ ಕೆಟ್ಟು ನಿಂತ ಪರಿಣಾಮ ಶನಿವಾರ ಸಂಜೆ ಪಾದಚಾರಿಗಳು ಹಾಗೂ ವಾಹನ ಸವಾರರು ತೊಂದರೆ ಅನುಭವಿಸಿದರು.
ಸ್ಟಾರ್ಟರ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಬಸ್ ಸುಮಾರು ಮೂರು ಗಂಟೆ ರಸ್ತೆಯಲ್ಲೇ ನಿಂತಿತ್ತು. ಇದರಿಂದ ರಸ್ತೆಯಲ್ಲಿ ಸಂಚಾರ ಸಿಕ್ಕು ಉಂಟಾಗಿತ್ತು.