ಮಾನ್ವಿಯಲ್ಲಿ ಭಾನುವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಆನಂದ ಎಚ್. ಕೊಣ್ಣೂರು ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ್, ಡಿಪೋ ವ್ಯವಸ್ಥಾಪಕ ನಾಗರಾಜ, ಸಹಾಯಕ ಸರ್ಕಾರಿ ಅಭಿಯೋಜಕಿ ಅರ್ಚನಾ ಯಾದವ್ ಇತರರಿದ್ದರು. 
ರಾಯಚೂರು

ಅತಿವೇಗದ ಚಾಲನೆಯಿಂದ ಅಪಘಾತ

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ನ್ಯಾಯಾಧೀಶ
  • ಆನಂದ
  • ಕೊಣ್ಣೂರು
ಮಾನ್ವಿ: ಅಮೂಲ್ಯ ಜೀವ ಉಳಿಸಿಕೊಳ್ಳಲು ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸಬೇಕು. ಇದರಿಂದ ಅಪಘಾತಗಳ ನಿಯಂತ್ರಣ ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಆನಂದ ಎಚ್. ಕೊಣ್ಣೂರು ಹೇಳಿದರು.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಪಟ್ಟಣದ ಸಾರಿಗೆ ಘಟಕದ ಆವರಣದಲ್ಲಿ ಭಾನುವಾರ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅತಿ ವೇಗವಾಗಿ ವಾಹನಗಳನ್ನು ಚಲಾಯಿಸಬಾರದು. ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಹೆಲ್ಮೆಟ್ ಹಾಕದೆ ಬೈಕ್ ಓಡಿಸಿದ ವೇಳೆ ಅಪಘಾತವಾದರೆ ತಲೆಗೆ ತೀವ್ರ ಪೆಟ್ಟಾಗಿ ಸಾವು ಸಂಭವಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.
ಡಿಪೋ ವ್ಯವಸ್ಥಾಪಕ ನಾಗರಾಜ ಮಾತನಾಡಿ,ಓವರ್ ಟೇಕ್ ಮಾಡುವುದು, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು ಅಪಾಯಕಾರಿಯಾಗಿದೆ ಎಂದರು. ಮಾನ್ವಿ ಠಾಣೆ ಎಎಸ್‌ಐ ಹನುಮೇಶ, ಪ್ರಮುಖರಾದ ಯಲ್ಲಪ್ಪ ಬಾದರದಿನ್ನಿ, ದತ್ತಾತ್ರೇಯ ಹಿರೆಕೊಟ್ನೆಕಲ್, ಚನ್ನಬಸವ ನಾಯಕ ಇತರರಿದ್ದರು.