- ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿಕೆ
- ವ್ಯಸನಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ
ಲಿಂಗಸುಗೂರು: ಯುವ ಸಂಪನ್ಮೂಲ ದೇಶದ ಆಸ್ತಿಯಾಗಿದ್ದು, ಯುವಕರು ಮದ್ಯ ಹಾಗೂ ಮಾದಕ ವಸ್ತುಗಳಿಂದ ದೂರವಿರುವಂತೆ ವ್ಯಾಪಕ ಜಾಗೃತಿ ಜೊತೆಗೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಮಂಡಳಿ ಕಾರ್ಯನಿರ್ವಹಿಸಲಿದೆ ಎಂದು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಸನಮುಕ್ತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕಿದೆ.
ಕಳ್ಳ ಮಾರ್ಗದ ಮೂಲಕ ಮಾದಕ ವಸ್ತುಗಳ ಮಾರಾಟ ಜಾಲವನ್ನು ಬೇರು ಸಮೇತ ಕಿತ್ತೆಸೆಯಬೇಕಿದೆ. ಈ ಭಾಗದಲ್ಲಿ ಮದ್ಯಮುಕ್ತ ಗ್ರಾಮಗಳಿದ್ದಲ್ಲಿ ಗಮನಕ್ಕೆ ತಂದರೆ ಅಕ್ಕಪಕ್ಕದ ಹಳ್ಳಿಗಳಲ್ಲಿಯೂ ಜಾಗೃತಿ ಮೂಡಿಸಿ ವ್ಯಸನಮುಕ್ತ ಗ್ರಾಮಗಳನ್ನಾಗಿಸಲು ಮಂಡಳಿ ಕೆಲಸ ಮಾಡಲಿದೆ ಎಂದು ತಿಳಿಸಿದರು.