- ಲಿಂಗಸುಗೂರು ವೀರಶೈವ ವಿದ್ಯಾವರ್ಧಕ ಸಂಘ
- ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ
ಲಿಂಗಸುಗೂರು: ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘ ಸಂಚಾಲಿತ ಶ್ರೀ ಬಸವೇಶ್ವರ ಸ್ವತಂತ್ರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪಪೂ ಕಾಲೇಜಿನ ಬೆಳ್ಳಿ ಸಂಭ್ರಮವು ಜ.3, 4ರಂದು ಜರುಗಲಿದೆ ಎಂದು ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ಹೇಳಿದರು.
ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.3ರ ಬೆಳಗ್ಗೆ 10.30ಕ್ಕೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ, ವೀವಿ ಸಂಘದ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಪುರ ಅಧ್ಯಕ್ಷತೆ ವಹಿಸುವರು. ಸಚಿವ ಶರಣಬಸಪ್ಪ ದರ್ಶನಾಪುರ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಬಾಲಕರ ನೂತನ ವಸತಿ ನಿಲಯ ಕಟ್ಟಡ ಉದ್ಘಾಟಿಸುವರು. ಸಚಿವ ಶರಣ ಪ್ರಕಾಶ ಪಾಟೀಲ್ ಕಲ್ಯಾಣ ಗ್ರಂಥ ಲೋಕಾರ್ಪಣೆ ಮಾಡುವರು. ಶಾಸಕ ಮಾನಪ್ಪ ವಜ್ಜಲ್, ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಪುರ, ಕನ್ನಡ ವಿವಿ ಉಪ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಭಾಗವಹಿಸುವರು ಎಂದರು.
ಮರುದಿನ ಜ.4ರ ಬೆಳಗ್ಗೆ 10.30 ಕ್ಕೆ ಪ್ರೌಢ ಶಿಕ್ಷಣ ಒಂದು ಮರುಚಿಂತನೆ, ಮಧ್ಯಾಹ್ನ ಉನ್ನತ ಶಿಕ್ಷಣ ಮತ್ತು ಸಂಶೋಧನೆ ಪ್ರಸ್ತುತ ಸವಾಲುಗಳ ಕುರಿತು ಗೋಷ್ಠಿಗಳು ನಡೆಯಲಿವೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಸಚಿವ ಸಂತೋಷ ಲಾಡ್, ಕಾನೂನು ವಿವಿ ವಿಶ್ರಾಂತ ಉಪ ಕುಲಪತಿ ಡಾ.ಜೆ.ಎಸ್. ಪಾಟೀಲ್, ಕೇಂದ್ರ ಮಾಜಿ ಸಚಿವ ಬಸವರಾಜ ಪಾಟೀಲ್ ಆನ್ವರಿ ಭಾಗವಹಿಸುವರು. ಸಾರ್ವಜನಿಕರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾರಂಭ ಯಶಸ್ಸುಗೊಳಿಸಬೇಕೆಂದು ಕೋರಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಪಾಟೀಲ್, ಪ್ರಾಚಾರ್ಯ ಬಸವರಾಜ ಮೇಟಿ ಇದ್ದರು.