ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟೃ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶಕ್ಕೆ ಅವಮಾನ ಮಾಡಿದನ್ನು ಖಂಡಿಸಿ ಶನಿವಾರ ಜಿಲ್ಲಾ ಬಿಜೆಪಿ ವತಿಯಿಂದ ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ನಡೆಸಿದರು. ಶಾಸಕ ಡಾ.ಶಿವರಾಜ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್, ಸಂತೋಷ್ ರಾಜಗುರು, ರಾಘವೇಂದ್ರ ಊಟ್ಟೂರು, ಬಂಡೇಶ ವಲ್ಕಂದಿನ್ನಿ, ಶಂಶಾಲಂ, ನರಸಪ್ಪ ಯಕ್ಲಾಸಪೂರ, ಪಿ.ಯಲ್ಲಪ್ಪ, ಕಡಗೋಲ್ ಆಂಜನೇಯ, ನರಸರೆಡ್ಡಿ ಇದ್ದರು. 
ರಾಯಚೂರು

ಬಿಜೆಪಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ -ಕಾರ್ಯಕರ್ತರ ಬಂಧನ, ಬಿಡುಗಡೆ

ರಾಯಚೂರು ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟೃ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶಕ್ಕೆ ಅವಮಾನ ಮಾಡಿದನ್ನು ಖಂಡಿಸಿ ಶನಿವಾರ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ ನಡೆಸಿದರು.
ನಗರದ ಗಂಜ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ರಾಹುಲ್ ಪ್ರತಿಕೃತಿ ದಹಿಸಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪೋಲಿಸರು ಕೆಲಕಾಲ ಬಂಧಿಸಿ ಬಿಡುಗಡೆ ಮಾಡಿದರು.
ಪ್ರತಿಭಟನೆ ವೇಳೆ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಭೆಯಲ್ಲಿ ಕಾಂಗ್ರೆಸ್ ಗುಂಡಾ ಕಾರ್ಯಕರ್ತರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಸರನ್ನು ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ದೇಶದ್ರೋಹಿ ಮುಖವಾಡ ಕಳಚಿದೆ. ಎಐ ಕುರಿತು ವಿಶ್ವದಾದ್ಯಂತ ಚರ್ಚೆ ನಡೆಯುತ್ತಿದ್ದು, ದೇಶಕ್ಕೆ ಕೆಟ್ಟ ಹೆಸರು ತರಬೇಕು. ಪ್ರಧಾನಿ ನರೇಂದ್ರ ಮೋದಿಗೆ ಅವಮಾನ ಮಾಡಿ ಮಸಿ ಬಳಿಯುವ ಕೆಲಸ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ತಮ್ಮ ನಡುವಳಿಕೆಯನ್ನು ಸರಿಪಡಿಸಿಕೊಳ್ಳದಿದ್ದರೆ ತಮ್ಮ ಮನೆಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್, ಸಂತೋಷ್ ರಾಜಗುರು, ರಾಘವೇಂದ್ರ ಊಟ್ಟೂರು, ಬಂಡೇಶ ವಲ್ಕಂದಿನ್ನಿ, ಶಂಶಾಲಂ, ನರಸಪ್ಪ ಯಕ್ಲಾಸಪೂರ, ಪಿ.ಯಲ್ಲಪ್ಪ, ಕಡಗೋಲ್ ಆಂಜನೇಯ, ನರಸರೆಡ್ಡಿ, ಮೌನೇಶ, ಶರಣಮ್ಮ ಕಾಮರೆಡ್ಡಿ, ಅನಿತಾ ,ವಿಜಯ ರಾಜೇಶ್ವರಿ,ವಿಪಿ ರೆಡ್ಡಿ ಸೇರಿದಂತೆ ಅನೇಕರು ಇದ್ದರು.