ಮಳೆ ಕೊರತೆಯಿಂದ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಸಂಪೂರ್ಣ ಒಣಗಿರುವ ಹಿನ್ನಲೆಯಲ್ಲಿ ಮಾನ್ವಿ ತಾಲೂಕನ್ನು ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿ ಪಟ್ಟಣದ ಬಸವ ವೃತ್ತದಲ್ಲಿ ಬುಧವಾರ ಬಿಜೆಪಿ ತಾಲೂಕು ಘಟಕದಿಂದ ಆಹಾರ ಇಲಾಖೆಯ ಉಪನಿರ್ದೇಶಕ ನೇಜಿರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ಟಿಎಪಿಸಿಎಂಎ ಅಧ್ಯಕ್ಷ ತಿಮ್ಮಾರೆಡ್ಡಿಗೌಡ, ಜೆ. ಸುಧಾಕರ, ಮಲ್ಲಿಕಾರ್ಜುನ ಜಕ್ಕಲದಿನ್ನಿ, ಬಸವರಾಜ ನಕ್ಕುಂದಿ, ಉಮೇಶ ಸಜ್ಜನ, ಚಂದ್ರಕಲಾ ಸ್ವಾಮಿ, ಸಿದ್ದಪ್ಪ ಕಣ್ಣೂರು ಇದ್ದರು.
ಮಾನ್ವಿ
ಮಳೆ ಕೊರತೆಯಿಂದ ತಾಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಸಂಪೂರ್ಣ ಒಣಗಿರುವ ಹಿನ್ನಲೆಯಲ್ಲಿ ಮಾನ್ವಿ ತಾಲೂಕನ್ನು ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಒತ್ತಾಯಿಸಿ ಪಟ್ಟಣದ ಬಸವವೃತ್ತದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಬುಧವಾರ ಆಹಾರ ಇಲಾಖೆಯ ಉಪನಿರ್ದೇಶಕ ನೇಜಿರ್ ಅಹ್ಮದ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ ಮಾತನಾಡಿ, ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಸಮರ್ಪಕ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಮಾನ್ವಿ ಸೇರಿದಂತೆ ಮಳೆ ಕೊರತೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಸರ್ಕಾರ ತಕ್ಷಣ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಕಲ್ಪಿಸಬೇಕು. ಅಲ್ಲದೆ, ಸರ್ಕಾರದ ಖರೀದಿ ಕೇಂದ್ರಗಳಿಗೆ ಜೋಳ ಮಾರಾಟ ಮಾಡಿದ ರೈತರಿಗೆ ಬಾಕಿ ಇರುವ ಹಣವನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸಿ ರೈತರ ನೆರವಿಗೆ ಬರಬೇಕು. ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಜೋಳ ಖರೀದಿಯ ಬಾಕಿ ಹಣವನ್ನು ಜುಲೈ 31ರೊಳಗೆ ರೈತರ ಖಾತೆಗೆ ಪಾವತಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ವೀರಭದ್ರಗೌಡ ಭೋಗಾವತಿ, ಟಿಎಪಿಸಿಎಂಎ ಅಧ್ಯಕ್ಷ ತಿಮ್ಮಾರೆಡ್ಡಿಗೌಡ, ಜೆ. ಸುಧಾಕರ, ಮಲ್ಲಿಕಾರ್ಜುನ ಜಕ್ಕಲದಿನ್ನಿ,
ಬಸವರಾಜ ನಕ್ಕುಂದಿ, ಉಮೇಶ ಸಜ್ಜನ, ಚಂದ್ರಕಲಾ ಸ್ವಾಮಿ, ಸಿದ್ದಪ್ಪ ಕಣ್ಣೂರು, ಮಲ್ಲಿಕಾರ್ಜುನಗೌಡ ಸಂಗಾಪುರ, ವೀರೇಶ ನಾಯಕ ಅನೇಕರು ಇದ್ದರು.