ಅಲಬನೂರು ಸರ್ಕಾರಿ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಪ್ರಾಚಾರ್ಯ ಡಾ. ಎಸ್.ಶಿವರಾಜ ಉದ್ಘಾಟಿಸಿದರು. ಉಪನ್ಯಾಸಕರಾದ ಕೆ. ಮೆಹಬೂಬ್ ರೌಡಕುಂದ, ಪಂಪಾಪತಿ ಕಲ್ಮಂಗಿ, ಮೌನೇಶ ಬಳಗನೂರು, ಶಂಕರಗೌಡ ಬೂತಲದಿನ್ನಿ ಇದ್ದರು. 
ರಾಯಚೂರು

ಉತ್ತಮ ಜೀವನ ರೂಪಿಸಿಕೊಳ್ಳಿ

ಪ್ರಮುಖ ಮುಖ್ಯಾಂಶಗಳು

  • ಮುಖ್ಯಶಿಕ್ಷಕ ಅಯ್ಯಪ್ಪ ಮೇಟಿ ಸಲಹೆ
  • ಸಿಂಧನೂರು ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಸಿಂಧನೂರು: ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆದಿರುವ ನೀವೇ ಧನ್ಯರು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಸರ್ಕಾರಿ ಪ್ರೌಢ ಶಾಲೆ ಮುಖ್ಯಶಿಕ್ಷಕ ಅಯ್ಯಪ್ಪ ಮೇಟಿ ಹೇಳಿದರು.
ಅಲಬನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಎನ್ನೆಸ್ಸೆಸ್, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಅಲಬನೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಉತ್ತಮ ಅವಕಾಶಗಳನ್ನು ಒದಗಿಸುತ್ತಿದೆ. ಸುಸಜ್ಜಿತ ಕಟ್ಟಡ, ವಿಶಾಲವಾದ ಆಟದ ಮೈದಾನ, ಗ್ರಂಥಾಲಯ, ಕಂಪ್ಯೂಟರ್, ಡಿಜಿಟಲ್ ಬೋರ್ಡ್, ಉತ್ತಮ ಪರಿಸರ ಹಾಗೂ ವಿಷಯವಾರು ಪರಿಣತ ಉಪನ್ಯಾಸಕರು ಇದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಡಾ. ಎಸ್.ಶಿವರಾಜ ಅಧ್ಯಕ್ಷತೆವಹಿಸಿದ್ದರು. ಉಪನ್ಯಾಸಕರಾದ ಕೆ.ಮೆಹಬೂಬ್ ರೌಡಕುಂದ, ಪಂಪಾಪತಿ ಕಲ್ಮಂಗಿ, ಮೌನೇಶ ಬಳಗಾನೂರು, ಶಂಕರಗೌಡ ಬೂತಲದಿನ್ನಿ, ಶಿವರಾಜ ಅಡಗಲ್, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಬಿ.ರವಿಕುಮಾರ ಸಾಸಲಮರಿ, ಮೌನೇಶ ಬೆಳಗುರ್ಕಿ ಇತರರಿದ್ದರು.