ತಾಲೂಕಿನ ಅರಸಿಗೇರಾ ತಾಂಡದಲ್ಲಿ ನಡೆಯುತ್ತಿರುವ ನರೇಗಾದಡಿ ಅರಣ್ಯ ಪ್ರದೇಶದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಈಶ್ವರ ಕುಮಾರ ಕಾಂದೋ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು. ತಾಪಂ ಇಓ ಚಂದ್ರಶೇಖರ ಪವಾರ್, ಕಾರ್ಯನಿರ್ವಾಹಕ ಅಭಿಯಂತರ ಸತೀಶ್, ತಾಪಂ ಸಹಾಯಕ ನಿರ್ದೇಶಕರಾದ ಹನುಮಂತ, ಶಿವಪ್ಪ, ಪಿಡಿಓ ಮೋಹಿನುದ್ದೀನ್ ಇದ್ದರು. 
ರಾಯಚೂರು

ಚಂದ್ರಬಂಡಾ ಗ್ರಾ.ಪಂಗೆ ಸಿಇಒ ಭೇಟಿ: ಕಂದಕ ಬದು ನಿರ್ಮಾಣ ಕಾಮಗಾರಿ ವೀಕ್ಷಣೆ

ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಸಿಗೇರಾ ತಾಂಡದಲ್ಲಿ ನಡೆಯುತ್ತಿರುವ ನರೇಗಾದಡಿ ಅರಣ್ಯ ಪ್ರದೇಶದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಈಶ್ವರ ಕುಮಾರ ಕಾಂದೋ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು.
ಕೂಲಿ ಕಾರ್ಮಿಕರಿಗೆ ಬೇಸಿಗೆ ಸಮಯದಲ್ಲಿ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು, ನೆರಳು ಮತ್ತು ಪ್ರಥಮ ಚಿಕಿತ್ಸಾ ವ್ಯವಸ್ಥೆ ನೀಡುತ್ತಿರುವ ಬಗ್ಗೆ ಕೂಲಿಕಾರರಿಂದ ಮಾಹಿತಿ ಪಡೆದುಕೊಂಡರು. ನಂತರ ಕೂಲಿಕಾರರ ಹಾಜರಾತಿಯನ್ನು ಎಎಂಎಂಎಸ್ ಅ್ಯಪ್ ಮುಖಾಂತರವೇ ಎರಡು ಬಾರಿ ಕಡ್ಡಾಯವಾಗಿ ಹಾಜಾರಾತಿ ತೆಗೆದುಕೊಳ್ಳಬೇಕು. ಬಿಸಿಲಿನ ತಾಪಮಾನ ಹೆಚ್ಚುತ್ತಿರುವದರಿಂದ ಕೆಲಸಕ್ಕೆ ಬೇಗನೆ ಬರಬೇಕು. ನಿಮ್ಮಗೆ ನೀಡಿರುವ ಅಳತೆ ಪ್ರಕಾರ ಕೆಲಸ ಮಾಡಬೇಕೆಂದು ಸೂಚಿಸಿದರು.
ನಂತರ ಚಂದ್ರಬಂಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಲ್ಯಾಬ ಟೆಸ್ಟ್, ಲಸಿಕೆ ಸಂಗ್ರಹ ಕೊಣೆ, ಹೆರಿಗೆಯ ಕೋಣೆ, ಪುರಷ,ಮಹಿಳೆಯರ ವಾರ್ಡ್ ಹಾಗೂ ಶಸ್ತ್ರಚಿಕಿತ್ಸೆ ಕೋಣೆಗಳಿಗೆ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಗ್ರಂಥಾಲಯಕ್ಕೆ ಭೇಟಿ ನೀಡಿ ಸಿಬ್ಬಂದಿ ಹಾಗೂ ಗ್ರಂಥಾಲಯದಲ್ಲಿರುವ ಪುಸ್ತಕಗಳ ವಿವರ ಪಡೆದರು. ಆರೋಗ್ಯ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಚತೆ ಕಾಪಾಡದ ಕಾರಣ ಅಧಿಕಾರಿ, ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಬೇಕೆಂದರು ತಿಳಿಸಿದರು.
ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಒಣ, ಹಸಿ ಕಸ ವಿಂಗಡಣೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಪಿಡಿಓಗೆ ತರಾಟೆಗೆ ತೆಗೆದುಕೊಂಡರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಮಲ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ವೀಕ್ಷಣೆ ಮಾಡಿ ಶೀಫ್ರದಲ್ಲಿ ಬಾಕಿಯಿರುವ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಸೂಚಿಸಿದರು.
ಈ ಸಂದರ್ಭದಲ್ಲಿ ತಾಪಂ ಇಓ ಚಂದ್ರಶೇಖರ ಪವಾರ್, ಕಾರ್ಯನಿರ್ವಾಹಕ ಅಭಿಯಂತರ ಸತೀಶ್, ತಾಪಂ ಸಹಾಯಕ ನಿರ್ದೇಶಕರಾದ ಹನುಮಂತ, ಶಿವಪ್ಪ, ಪಿಡಿಓ ಮೋಹಿನುದ್ದೀನ್ ಸೇರಿ ಅನೇಕರು ಇದ್ದರು.