ಬಿಸಿಲಿನ ತಾಪಮಾನ ಹಿನ್ನಲೆಯಲ್ಲಿ ಕಚೇರಿ ಸಮಯದಲ್ಲಿ ಬದಲಾವಣೆ ನಿಮಿತ್ತ ಬುಧವಾರ ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ ರಾಯಚೂರಿನ ಜಿ.ಪಂ ಕಾರ್ಯಾಲಯದ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಹಾಜರಾತಿಯನ್ನು ಪರಿಶೀಲನೆ ಮಾಡಿದರು. ಲೆಕ್ಕಾಧಿಕಾರಿ ವಿಜಯ ಶಂಕರ, ಸಹಾಯಕ ಕಾರ್ಯದರ್ಶಿ ರಾಘವೇಂದ್ರ ಇದ್ದರು. 
ರಾಯಚೂರು

ಕಚೇರಿಯ ಸಮಯ ಬದಲಾವಣೆ -ವಿವಿಧ ಶಾಖೆಗಳಿಗೆ ಭೇಟಿ ಸಿಇಓ ಭೇಟಿ

ರಾಯಚೂರು 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನಲೆಯಲ್ಲಿ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಚೇರಿ ಸಮಯದಲ್ಲಿ ಬದಲಾವಣೆ ಹಿನ್ನಲೆಯಲ್ಲಿ ಬುಧವಾರ ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ ನಗರದ ಜಿ.ಪಂ ಕಾರ್ಯಾಲಯದ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಹಾಜರಾತಿಯನ್ನು ಪರಿಶೀಲನೆ ಮಾಡಿದರು.
ಈ ವೇಳೆ ಮಾತನಾಡಿ, ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ, ಅಡೆತಡೆ ಇಲ್ಲದೇ ಕರ್ತವ್ಯ ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲತೆಯಾಗದಂತೆ ಹಾಗೂ ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿ ಇಲ್ಲದೇ ಕರ್ತವ್ಯ ನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಜಿ.ಪಂ ಕಾರ್ಯಾಲಯದ ವಿವಿಧ ವಿಭಾಗಗಳಾದ ಆಡಳಿತ ವಿಭಾಗ, ನರೇಗಾ ವಿಭಾಗ, ಎಸ್.ಬಿ.ಎಂ ವಿಭಾಗ, ಲೆಕ್ಕಾ ಶಾಖೆ ವಿಭಾಗ, ಯೋಜನಾ ವಿಭಾಗ, ಗ್ರಾಮೀಣಾ ಮತ್ತು ಕುಡಿಯುವ ನೀರು ಶಾಖೆಗಳಿಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದರು. ಇನ್ನೂ ಕೆಲವು ಅಧಿಕಾರಿ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬಾರದೆ ಇರುವ ಕಾರಣ ಅವರಿಗೆ ಇನ್ನು ಮುಂದೆ ಈ ರೀತಿಯಾಗದಂತೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದರು.
ನಂತರ ಕೆಲವು ಶಾಖೆಗಳಲ್ಲಿ ಸ್ವಚ್ಚತೆ ಇಲ್ಲದಿರುವುದನ್ನು ಕಂಡು ಅಸಮಧಾನಗೊಂಡು ಸ್ವಚ್ಚವಾಗಿ ಇಟ್ಟುಕೊಳ್ಳಲು ಸಂಬಂಧಿಸಿದ ಸಿಬ್ಬಂದಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಯೋಜನಾ ನಿರ್ದೇಶಕ ಶರಣಬಸವರಾಜ ಕೆ, ಮುಖ್ಯ ಯೊಜನಾ ಅಧಿಕಾರಿ ಡಾ.ಟಿ.ರೋಣಿ, ಲೆಕ್ಕಾಧಿಕಾರಿ ವಿಜಯ ಶಂಕರ, ಸಹಾಯಕ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ಅನೇಕರು ಇದ್ದರು.