ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ಎಡಿಸಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಪೂರ್ವಭಾವಿ ಸಭೆ ನಡೆಯಿತು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಸೋಮಶೇಖರಪ್ಪ ಹೊಕ್ರಾಣಿ. ಪ್ರಮುಖರಾದ ಸಿದ್ರಾಮೇಶ್ವರ ಇದ್ದರು. 
ರಾಯಚೂರು

ದ್ವಿತೀಯ ಪಿಯುಸಿ ಪರೀಕ್ಷೆ-2 ಸುಸೂತ್ರವಾಗಿ ನಡೆಸಿ- ಎಡಿಸಿ

ರಾಚಯ್ಯ ಸ್ವಾಮಿ
ರಾಯಚೂರು
ದ್ವಿತೀಯ ಪಿಯುಸಿ ಪರೀಕ್ಷೆ-2ರ ಜಿಲ್ಲೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸುಸೂತ್ರವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏ.30 ರಿಂದ ಮೇ. 13 ರವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-2 ಯಾವುದೇ ಸಮಸ್ಯೆಗಳಾಗದಂತೆ ನಡೆಸಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿಗಳು ತಮಗೆ ನಿಗದಿಪಡಿಸಿದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.
ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಿದ್ದು. ರಾಯಚೂರು ತಾಲ್ಲೂಕಿನಲ್ಲಿ ಎರಡು. ಲಿಂಗಸೂಗುರು ತಾಲ್ಲೂಕಿನಲ್ಲಿ ಒಂದು. ದೇವದುರ್ಗ ತಾಲ್ಲೂಕಿನಲ್ಲಿ ಒಂದು. ಸಿಂಧನೂರು ತಾಲ್ಲೂಕಿನಲ್ಲಿ ಒಂದು ಹಾಗೂ ಮಾನ್ವಿ ತಾಲ್ಲೂಕಿನಲ್ಲಿ ಒಂದು ಸೇರಿ ಒಟ್ಟು 6 ಪರೀಕ್ಷಾ ಕೇಂದ್ರಗಳು ಜಿಲ್ಲೆಯಲ್ಲಿದ್ದು ಯಾವುದೇ ಕೇಂದ್ರಗಳಲ್ಲಿ ಸಮಸ್ಯೆಗಳಾಗದಂತೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ನೋಡಿಕೊಳ್ಳಬೇಕೆಂದರು.

ಎಸ್‌ಎಸ್‌ಎಲ್‌ಸಿಯಲ್ಲಿ ಬಂದ ಉತ್ತಮ ಫಲಿತಾಂಶ ಪಿಯುಸಿ ಯಲ್ಲಿ ಬರುವಂತೆ ಎಲ್ಲರೂ ಶ್ರಮಿಸಬೇಕು. ತಮಗೆ ಏನಾದರೂ ಸಮಸ್ಯೆಗಳಾದರೆ ನಮ್ಮ ಗಮನಕ್ಕೆ ತರಬೇಕು ದ್ವಿತೀಯ ಪಿಯುಸಿ ಪರೀಕ್ಷೆ-1 ಯಶಸ್ವಿಯಾಗಿ ನಡೆಸಿದಂತೆ ದ್ವಿತೀಯ ಪಿಯುಸಿ ಪರೀಕ್ಷೆ- 2 ನ್ನು ಯಶಸ್ವಿಯಾಗಿ ನಡೆಸಬೇಕು. ಈಗಾಗಲೇ ರೂಟ್ ಆಫೀಸರ್. ಎಕ್ಸಾಮ ಚಿಫ ಸೇರಿದಂತೆ ಇತರರು ಪರೀಕ್ಷೆಗೆ ನಿಯೋಜಿತ ಎಲ್ಲರೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಎಂದರು.

ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಸೋಮಶೇಖರಪ್ಪ ಹೊಕ್ರಾಣಿ. ಪ್ರಮುಖರಾದ ಸಿದ್ರಾಮೇಶ್ವರ ಸೇರಿ ಅನೇಕರು ಇದ್ದರು.