ಮಾನ್ವಿ ಮೌಲಾನ ಆಜಾದ್ ಮಾದರಿಯ ಆಂಗ್ಲ ಮಾಧ್ಯಮ ಶಾಲಾ-ಕಾಲೇಜು ಕಟ್ಟಡ ಕಾಮಗಾರಿಗೆ ಸಚಿವ ಎನ್.ಎಸ್.ಬೋಸರಾಜು ಭೂಮಿ ಪೂಜೆ ನೆರವೇರಿಸಿದರು. ಶಾಸಕ ಹಂಪಯ್ಯನಾಯಕ, ನಯೋಪ್ರಾ ಅಧ್ಯಕ್ಷ ಅಬ್ದುಲ್ ಗಫೂರ್‌ಸಾಬ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಕೆ.ಅಮರೇಶಪ್ಪ, ಬಿಸಿಎಂ ತಾಲೂಕು ಅಧಿಕಾರಿ ಭಾಗಯ್ಯನಾಯಕ ಇತರರಿದ್ದರು.
- ಸಚಿವ ಎನ್.ಎಸ್.ಬೋಸರಾಜು ಸೂಚನೆ
- ಮಾನ್ವಿ ಶಾಲೆ ಕಾಲೇಜು ಕಾಮಗಾರಿಗೆ ಭೂಮಿಪೂಜೆ
ಮಾನ್ವಿ: ಸರ್ಕಾರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗ ಪಡೆಯಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಪಟ್ಟಣದ ದೇವನ ತೋಟ ಪ್ರಗತಿ ಗಾರ್ಡನ್ ಹತ್ತಿರ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮೌಲಾನಾ ಆಜಾದ್ ಮಾದರಿಯ ಆಂಗ್ಲ ಮಾಧ್ಯಮ ಶಾಲೆ ಹಾಗೂ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಮಾತನಾಡಿದರು.
ತಾಲೂಕಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವುದಕ್ಕೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಅಂದಾಜು 5.27 ಕೋಟಿ ರೂ. ವೆಚ್ಚದಲ್ಲಿ ಶಾಲಾ-ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದರು. ಪ್ರಮುಖರಾದ ಅಕ್ಬರ್‌ಪಾಷಾ, ಶರಣಪ್ಪ ಗುಡದಿನ್ನಿ, ಇಸ್ಮಾಯಿಲ್‌ಸಾಬ್, ಶಾಂತಪ್ಪ, ಚಂದ್ರಶೇಖರ ಕುರ್ಡಿ, ಮಹಾಂತೇಶಸ್ವಾಮಿ ರೌಡೂರು ಇನ್ನಿತರರಿದ್ದರು.