ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ವತಿಯಿಂದ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಗೆ ಪ್ರೋಬೆಷನರಿ ಐಎಎಸ್ ಅಧಿಕಾರಿ ಪುರುರಾಜ ಸಿಂಗ್ ಸೋಲಂಕಿ ಕ್ರಿಕೆಟ್ ಆಡುವ ಮೂಲಕ ಚಾಲನೆ ನೀಡಿದರು. ಮಾಹಿತಿ ಆಯೋಗದ ಆಯುಕ್ತ ಬಿ.ವೆಂಕಟಸಿಂಗ್ , ಎಎಸ್ಪಿ ಕುಮಾರ ಸ್ವಾಮಿ, ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್,ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಖಜಾಂಚಿ ಸಣ್ಣ ಈರಣ್ಣ, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘದ ಅಧ್ಯಕ್ಷರಾದ ಚೆನ್ನಬಸವ ಬಾಗಲವಾಡ ,ಕಾರ್ಯದರ್ಶಿ ಖಾನ್ ಸಾಬ್ ಮೋಮಿನ್, ಶ್ರೀಕಾಂತ ಸಾವೂರು ಇದ್ದರು.
- ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ- ಪುರುರಾಜ ಸಿಂಗ್ ಸೋಲಂಕಿ.
- ಕ್ರೀಡೆ ನಮ್ಮ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ
ರಾಯಚೂರು ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ ಸಾಧ್ಯವೆಂದು ಪ್ರೋಬೆಷನರಿ ಐಎಎಸ್ ಅಧಿಕಾರಿ ಪುರುರಾಜ ಸಿಂಗ್ ಸೋಲಂಕಿ ಹೇಳಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ,ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ನಿಮಿತ್ತ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ,
ಪ್ರತಿಯೊಬ್ಬರು ತಮ್ಮ ದಿನ ನಿತ್ಯದ ಯಾಂತ್ರಿಕ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧಿಸಲು ಕ್ರೀಡೆ ಅತ್ಯಂತ ಸಹಕಾರಿಯಾಗಿದ್ದು ನಾವೆಲ್ಲರೂ ನಮ್ಮ ಬಿಡುವಿನ ಸಮಯದಲ್ಲಿ ಕ್ರೀಡೆಗಳಲ್ಲಿ ತೊಡಗಬೇಕೆಂದರು.
ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ.ವೆಂಕಟಸಿಂಗ್ ಮಾತನಾಡಿ, ಕ್ರೀಡೆ ನಮ್ಮ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಪತ್ರಕರ್ತರು ತಮ್ಮ ದಿನ ನಿತ್ಯದ ಸುದ್ದಿ ಸಂಗ್ರಹ ಜಂಜಾಟದಲ್ಲಿ ತೊಡಗಿರುತ್ತಾರೆ ಅವರು ಒತ್ತಡ ಜೀವನದಿಂದ ಹೊರಬರಲು ಕ್ರೀಡೆ ಅತಿಮುಖ್ಯವೆಂದು ಅಭಿಪ್ರಾಯಪಟ್ಟ ಅವರು ನಾನು ಸಹ ಪತ್ರಕರ್ತ ವೃತ್ತಿಯಲ್ಲಿರುವ ಸಂದರ್ಭದಲ್ಲಿ ಪ್ರತಿ ವರ್ಷ ಆಯೋಜಿಸುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಎಎಸ್ಪಿ ಕುಮಾರ ಸ್ವಾಮಿ, ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್,ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಖಜಾಂಚಿ ಸಣ್ಣ ಈರಣ್ಣ, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘದ ಅಧ್ಯಕ್ಷರಾದ ಚೆನ್ನಬಸವ ಬಾಗಲವಾಡ ,ಕಾರ್ಯದರ್ಶಿ ಖಾನ್ ಸಾಬ್ ಮೋಮಿನ್, ಶ್ರೀಕಾಂತ ಸಾವೂರು, ಚೆನ್ನಬಸವಣ್ಣ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಾ ಶಾವಂತಗೇರಿ ಸೇರಿದಂತೆ ಹಿರಿಯ ಕಿರಿಯ ಪತ್ರಕರ್ತರು ಇದ್ದರು.