ಮಂತ್ರಾಲಯದ ರಾಯರ ಮಠದ ಶ್ರೀ ಸುಯತೀಂದ್ರ ತೀರ್ಥ ಕಾಲೋನಿಯಲ್ಲಿ ಮಂಗಳವಾರ ಕಾರ್ಮಿಕರ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿಯಿಂದ ಸಿಲಿಂಡರ್ ಸ್ಫೋಟಗೊಂಡಿರುವುದು.
ರಾಯಚೂರು
ಮಂತ್ರಾಲಯದ ರಾಯರ ಮಠದ ಶ್ರೀ ಸುಯತೀಂದ್ರ ತೀರ್ಥ ಕಾಲೋನಿಯ ಕಾರ್ಮಿಕರ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿಯಿಂದ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಮಂಗಳವಾರ ಜರುಗಿದೆ.
ರಾಯರ ಮಠದಲ್ಲಿ ಕಟ್ಟಡ ಕೆಲಸ, ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರ ಶೆಡ್‌ನಲ್ಲಿ ಬಿಸಿಲಿನ ತಾಪದಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಸ್ಪೋಟ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.
ಮಾಹಿತಿ ತಿಳಿದ ಅಗ್ನಿಶಾಮಕ ದಳ, ಮಂತ್ರಾಲಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶ್ರೀ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಐದು ಶೆಡ್‌ನಲ್ಲಿ ವಾಸಿಸುತ್ತಿದ್ದ 20 ಜನರಿಗೆ ರೇಷನ್, ಅಗತ್ಯ ವಸ್ತುಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಈ ಕುರಿತು ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.