ಮಸ್ಕಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ, ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮೌನೇಶ ನಾಯಕ, ಮಂಡಲ ಕಾರ್ಯದರ್ಶಿ ವೆಂಕಟೇಶ ಇತರರಿದ್ದರು.
- ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಹೇಳಿಕೆ
- ಮಸ್ಕಿ ಪಂಡಿತ ದೀನದಯಾಳ್ ಉಪಾಧ್ಯಾಯ ಪುಣ್ಯಸ್ಮರಣೆ
ಮಸ್ಕಿ: ರಾಷ್ಟ್ರ ಮೊದಲು ಎಂದು ಪ್ರತಿಪಾದಿಸಿದ ರಾಷ್ಟ್ರ ನಾಯಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಸಿದ್ಧಾಂತ ಸರ್ವಕಾಲಿಕ ಪ್ರಸ್ತುತ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶರಣಯ್ಯ ಸೊಪ್ಪಿಮಠ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪಂಡಿತ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕರ್ತರು ಪಂಡಿತ್ ದೀನದಯಾಳ್ ಅವರ ತತ್ವ ಸಿದ್ಧಾಂತಗಳನ್ನು ಪಾಲಿಸಬೇಕು ಎಂದರು.
ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮೌನೇಶ ನಾಯಕ, ಮಂಡಲ ಕಾರ್ಯದರ್ಶಿ ವೆಂಕಟೇಶ, ಪ್ರಮುಖರಾದ ಬಸವರಾಜ ಪಾಟೀಲ್ ವಕೀಲರು, ಶಿವರಾಜ ಬುಕ್ಕಣ್ಣ, ದುರ್ಗಪ್ಪ ಗೋನಾವಾರ, ಜಿ.ಎಸ್.ಆನಂದ, ತಿಮ್ಮಣ್ಣ ನಾಯಕ ಇತರರಿದ್ದರು.