ಕರ್ನಾಟಕ ರಕ್ಷಣಾ ಸೇವಾದಳದ ಜಿಲ್ಲಾಧ್ಯಕ್ಷ ಅ.ಮ. ನಡುವಿನಮನಿ
ರಾಯಚೂರು ತಾಲೂಕಿನ ಶಕ್ತಿನಗರದ ತಾಜ್ ಹೋಟೆಲ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ವಸತಿ ಶಾಲೆಯನ್ನು ಸ್ಥಳಾಂತರ ಮಾಡಿ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಬೇಕೆಂದು ಅಖಂಡ ಕರ್ನಾಟಕ ರಕ್ಷಣಾ ಸೇವಾದಳದ ಜಿಲ್ಲಾಧ್ಯಕ್ಷ ಅ.ಮ. ನಡುವಿನಮನಿ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಜ್ ಹೋಟೆಲ್‌ನಲ್ಲಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಇಲ್ಲದೇ ಇರುವದಿರಂದ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ನಡೆಸಿದ ಜನತಾದರ್ಶನದಲ್ಲಿ ದೂರು ನೀಡಲಾಗಿತ್ತು. ಮೂರು ತಿಂಗಳೊಳಗೆ ಸ್ಥಳಾಂತರ ಮಾಡುವದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೂ ಇಂದಿಗೂ ಸ್ಥಳಾಂತರವಾಗದೇ ಇರುವದ ತಾಜ್ ಹೋಟೆಲ್ ಮಾಲೀಕರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಮೀಲಾಗಿರುಗವ ಸಂಶಯಗಳಿವೆ.
ಕೂಡಲೇ ಅಂಬೇಡ್ಕರ್ ವಸತಿ ಶಾಲೆಯ ಪ್ರಾಚಾರ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವಸತಿ ಶಾಲೆಯನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಹನುಮೇಶ ಗುಡಿ ಇದ್ದರು.