ತಾಲೂಕಿನ ರಾಜೋಳಿ ಬಂಡಾ ತಿರುವು ಯೋಜನೆ ಬಳಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಯನ್ನು ನಿಯಮಗಳ ಉಲ್ಲಂಘಿಸಿ ನಡೆಯುತ್ತಿದೆಂದು ಆರೋಪಿಸಿ ತೆಲಂಗಾಣದ ಬಿಆರ್‌ಎಸ್ ಪಕ್ಷದ ಕಾರ್ಯಕರ್ತರು ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಿ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ಮಾಡಿದರು. ತೆಲಂಗಾಣದ ಮಾಜಿ ಸಚಿವ ಶ್ರೀನಿವಾಸಗೌಡ, ಮಾಜಿ ಶಾಸಕರಾದ ಲಕ್ಷ್ಮಣಗೌಡ, ಪ್ರವೀಣಕುಮಾರ ಇದ್ದರು.
- ತೆಲಂಗಾಣ ಬಿಆರ್‌ಎಸ್ ಪಕ್ಷದಿಂದ ಪ್ರತಿಭಟನೆ
ರಾಯಚೂರು
ಮಾನ್ವಿ ತಾಲೂಕಿನ ರಾಜೋಳಿಬಂಡಾ ತಿರುವು ಯೋಜನೆ ಬಳಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಯನ್ನು ನಿಯಮಗಳ ಉಲ್ಲಂಘಿಸಿ ನಡೆಯುತ್ತಿದೆಂದು ಆರೋಪಿಸಿ ತೆಲಂಗಾಣದ ಬಿಆರ್‌ಎಸ್ ಪಕ್ಷದ ಕಾರ್ಯಕರ್ತರು ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಿ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ಮಾಡಿದರು.
ಕರ್ನಾಟಕ ಸರ್ಕಾರ ಹಾಗೂ ತೆಲಂಗಾಣ ಸರ್ಕಾರಕ್ಕೆ ಮಾಹಿತಿ ನೀಡದೇ ಕುಡಿಯುವ ನೀರಿನ ಕಾಮಗಾರಿ ಕೈಗೆತ್ತಿಕೊಂಡಿರುವದು ತೆಲಂಗಾಣದ 40ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು, ಕೃಷಿಗೆ ಸಮಸ್ಯೆಯಾಗಲಿದೆ. ತೆಲಂಗಾಣದ ಕಾಂಗ್ರೆಸ್ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿರುವದರಿಂದ ಅಕ್ರಮ ನೀರಾವರಿ ಯೋಜನೆ ನಡೆದರೂ ತೆಲಂಗಾಣದ ಸಿಎಂ ರೆವಂತರೆಡ್ಡಿ ವಿರೋಧಿಸಿ ವ್ಯಕ್ತಪಡಿಸದೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರೈತರ ಜಮೀನುಗಳಿಗೆ ಹಾನಿಯಾಗುವ ರೀತಿಯಲ್ಲಿ ಪೈಪ್‌ಲೈನ್ ಅಳವಡಿಸಲಾಗುತ್ತಿದ್ದು, ರೈತರ ಒಪ್ಪಿಗೆ ಹಾಗೂ ಸಮರ್ಪಕ ಮಾಹಿತಿ ನೀಡದೆ ಕಾಮಗಾರಿ ನಡೆಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಉನ್ನತ ಮಟ್ಟದ ತಾಂತ್ರಿಕ ಹಾಗೂ ಆಡಳಿತಾತ್ಮಕ ತನಿಖೆ ನಡೆಸಬೇಕು. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತೆಲಂಗಾಣದ ಮಾಜಿ ಸಚಿವ ಶ್ರೀನಿವಾಸಗೌಡ, ಮಾಜಿ ಶಾಸಕರಾದ ಲಕ್ಷ್ಮಣಗೌಡ, ಪ್ರವೀಣಕುಮಾರ , ಮಾನ್ವಿ ತಹಸೀಲ್ದಾರ ಭೀಮರಾಯ ರಾಮಸಮುದ್ರ, ಪಿಐ ಸೋಮಶೇಖರ, ನೀರಾವರಿ ಇಲಾಖೆ ಸಹಾಯಕ ಅಧಿಕಾರಿ ಲೋಕೇಶ ಸೇರಿ ರೈತ ಸಂಘಟನೆಗಳ ಮುಖಂಡರು ಇದ್ದರು.