ಮಸ್ಕಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ ಮಾತನಾಡಿದರು. ಸಿಪಿಐ ರಾಮಪ್ಪ ಜಲಗೇರಿ, ಪಿಎಸ್‌ಐ ಕೆ.ರಂಗಯ್ಯ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಪುರಸಭೆ ಸದಸ್ಯರಾದ ರವಿಗೌಡ, ಮೌನೇಶ ಮುರಾರಿ, ದೊಡ್ಡ ಕರಿಯಪ್ಪ, ಪ್ರಮುಖರಾದ ಬಸನಗೌಡ ಪೊಲೀಸ್ ಪಾಟೀಲ್, ಸಾರಪ್ಪ ಬಂಗಾಲಿ ಇತರರಿದ್ದರು. 
ರಾಯಚೂರು

ಅಹಿತಕರ ಘಟನೆಗಳಿಗೆ ಆಸ್ಪದ ನೀಡದಿರಿ

ಪ್ರಮುಖ ಮುಖ್ಯಾಂಶಗಳು

  • ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ ಎಚ್ಚರಿಕೆ
  • ಮಸ್ಕಿ ಪೊಲೀಸ್ ಠಾಣೆ ಶಾಂತಿ ಸಭೆ
ಮಸ್ಕಿ: ಪಟ್ಟಣ ಶಾಂತಿ-ಸೌಹಾರ್ದಕ್ಕೆ ಹೆಸರುವಾಸಿಯಾಗಿದ್ದು, ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ದತ್ತಾತ್ರೇಯ ಕರ್ನಾಡ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು. ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಆಸ್ಪದ ಕೊಡಬಾರದು. ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಿಪಿಐ ರಾಮಪ್ಪ ಜಲಗೇರಿ ಮಾತನಾಡಿ, ಹಿಂದೂ-ಮುಸ್ಲಿಮರ ಹಬ್ಬಗಳು ಶಾಂತಿ, ಸೌಹಾರ್ದಕ್ಕೆ ಮಹತ್ವ ನೀಡಿವೆ. ಹಬ್ಬಗಳ ಆಚರಣೆಯ ಹಿಂದಿನ ಉದ್ದೇಶವನ್ನು ಅರ್ಥ ಮಾಡಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಅದರ ಮಹತ್ವ ತಿಳಿಸಿಕೊಡಬೇಕು ಎಂದರು.
ಮುಸ್ಲಿಂ ಪ್ರಮುಖ ಜಿಲಾನಿ ಖಾಜಿ ಮಾತನಾಡಿ, ಹಿಂದೂ-ಮುಸ್ಲಿಮರು ಸಹೋದರರಂತೆ ಜೀವನ ನಡೆಸುತ್ತಿದ್ದೇವೆ. ಮುಸ್ಲಿಮರ ಹಬ್ಬಗಳಲ್ಲಿ ಹಿಂದೂಗಳ ಸಹಕಾರ, ಹಿಂದೂಗಳ ಹಬ್ಬದಲ್ಲಿ ಮುಸ್ಲಿಮರ ಸಹಕಾರ ಇರುತ್ತದೆ. ಹಬ್ಬದಂದು ಪುರಸಭೆಯ ಅಧಿಕಾರಿಗಳು ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪೊಲೀಸರು ಟ್ರಾಫಿಕ್ ಜಾಮ್ ಆಗದಂತೆ ನೋಡಿಕೊಳ್ಳಬೇಕೆಂದು ಕೋರಿದರು.