ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಲಾಯಿತು. ಪ್ರಭಾರಿ ಜಿಲ್ಲಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ , ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ರವಿ ಬೋಸರಾಜು ಇದ್ದರು. 
ರಾಯಚೂರು

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಗಣ್ಯರಿಂದ ಮಾಲಾರ್ಪಣೆ


ಮೆರವಣಿಗೆಯು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ರಂಗಮಂದಿರವರೆಗೆ ವಿವಿಧ ಕಲಾ ತಂಡದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೀದರ್ ಬುದ್ಧವಿಹಾರನ ಬಂತೇಜಿ ಯಾಕತ್ನೂರ್,ಶಾಸಕ ಡಾ.ಶಿವರಾಜ ಎಸ್.ಪಾಟೀಲ್, ಜಿಲ್ಲೆಯ ಪ್ರಭಾರಿ ಜಿಲ್ಲಾಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ , ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮಹೋಪಾತ್ರ, ಎಎಸ್ಪಿ ಕುಮಾರಸ್ವಾಮಿ, ಎಸಿ ಡಾ.ಹಂಪಣ್ಣ ಸಜ್ಜನ್ , ತಹಶಿಲ್ದಾರ್ ಸುರೇಶ್ ವರ್ಮ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರವೀಣ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ ಸೇರಿ ಅನೇಕರು ಇದ್ದರು.