ಸಿಂಧನೂರು ತಾಲೂಕಿನ ಚಿಕ್ಕಬೇರ‌್ಗಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಉದ್ಘಾಟಿಸಿದರು. ಪ್ರಮುಖರಾದ ಶಂಕರಗೌಡ ಉಮಲೂಟಿ, ವೀರಭದ್ರಗೌಡ ಉಮಲೂಟಿ, ಪಂಪನಗೌಡ ಜಾಲಿಹಾಳ ಇತರರಿದ್ದರು. 
ರಾಯಚೂರು

ಪ್ರಗತಿಗೆ ಶಿಕ್ಷಣವೇ ಮೂಲಸ್ತಂಭ

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ
  • ಪ್ರೌಢ ಶಾಲೆ
  • ಉದ್ಘಾಟನೆ
ಸಿಂಧನೂರು: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯ ದೊರಯಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
ತಾಲೂಕಿನ ಚಿಕ್ಕಬೇರ‌್ಗಿ ಗ್ರಾಮದಲ್ಲಿ 2025-26ನೇ ಸಾಲಿನ ಸರ್ಕಾರಿ ಪ್ರೌಢ ಶಾಲೆ ಉದ್ಘಾಟನೆ ಹಾಗೂ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ, ಉತ್ತಮ ಶಿಕ್ಷಕರ ಬೆಂಬಲ ಹಾಗೂ ಸಮರ್ಪಕ ಮೂಲಸೌಕರ್ಯ ದೊರೆತಲ್ಲಿ, ನಗರ ಪ್ರದೇಶದ ಮಕ್ಕಳಿಗೆ ಸಮಾನವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಶಿಕ್ಷಣದ ಬೆಳಕು ಗ್ರಾಮಗಳನ್ನೂ ತಲುಪಿದಾಗ ಮಾತ್ರ ಸಮಾಜಗಳ ಸಮಗ್ರ ಅಭಿವೃದ್ಧಿ ಸಾಧ್ಯ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ ಮಾತನಾಡಿ, ಪ್ರಸ್ತುತ ಶಾಲೆಯಲ್ಲಿ 9ನೇ ತರಗತಿಯಲ್ಲಿ 30 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಸರ್ಕಾರದಿಂದ ಅನುಮೋದನೆ ದೊರಕಿದ ನಂತರ ತರಗತಿಗಳನ್ನು ಅಧಿಕೃತವಾಗಿ ಪ್ರಾರಂಭಿಸಲಾಗುವುದು ಎಂದರು.