ರಾಯಚೂರಿನ ಕನ್ನಡ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಿನಿ ಆಪರೇಟರ್ ಎ.ಪ್ರಕಾಶ ವಯೋ ನಿವೃತಿ ಕಾರ್ಯಕ್ರಮ ನಡೆಯಿತು. ವಾತಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಸುರೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್ .ಗುರುನಾಥ, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯಕುಮಾರ್ ಜಾಗಟಗಲ್, ಪತ್ರಕರ್ತರಾದ ಬಸವರಾಜ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಶಿವಮೂರ್ತಿ ಹಿರೇಮಠ, ಚನ್ನಬಸವ ಬಾಗಲವಾಡ, ವೀರರೆಡ್ಡಿ, ಸುಶೀಲೇಂದ್ರ ಕುಲಕರ್ಣಿ ಇದ್ದರು.
- ವಾರ್ತಾ ಇಲಾಖೆಯಲ್ಲಿ ಪ್ರಕಾಶ್ ಅವರಿಂದ ಉತ್ತಮ ಕೆಲಸ ನಿರ್ವಹಣೆ: ಜಿ.ಸುರೇಶ
ರಾಯಚೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಿನಿ ಆಪರೇಟರ್ ಹುದ್ದೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಎ.ಪ್ರಕಾಶ ಶುಕ್ರವಾರ ವಯೋನಿವೃತ್ತಿ ಹೊಂದಿದರು.
ಇಲಾಖೆಯ ವತಿಯಿಂದ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಶುಕ್ರವಾರ ಸನ್ಮಾನಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಸುರೇಶ್ ಮಾತನಾಡಿ, ನಿವೃತ್ತರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮೂಲಕ ಇಲಾಖೆಯಲ್ಲಿ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದಾರೆ. ಅವರ ಸೇವೆ ಸಹೋದ್ಯೋಗಿಗಳಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ನೆಮ್ಮದಿಯ ಜೀವನ ಸಾಗಿಸಲಿ ಎಂದರು.
ವಯೋ ನಿವೃತ್ತರಾದ ಎ.ಪ್ರಕಾಶ್ ಮಾತನಾಡಿ, ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಸ್ಮರಿಸಿಕೊಂಡ ಅವರು, ತಮ್ಮ ಸೇವಾ ಜೀವನದ ನೆನಪುಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್ .ಗುರುನಾಥ, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯಕುಮಾರ್ ಜಾಗಟಗಲ್, ಪತ್ರಕರ್ತರಾದ ಬಸವರಾಜ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಶಿವಮೂರ್ತಿ ಹಿರೇಮಠ, ಚನ್ನಬಸವ ಬಾಗಲವಾಡ, ವೀರರೆಡ್ಡಿ, ಸುಶೀಲೇಂದ್ರ ಕುಲಕರ್ಣಿ, ಶಿವರಾಜ ಸೇರಿದಂತೆ ಅನೇಕರು ಇದ್ದರು.