ಮುದಗಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮುಖಂಡರಾದ ಎಸ್.ಆರ್. ರಸೂಲ್, ಪುರಸಭೆ ಮಾಜಿ ಉಪಾಧ್ಯಕ್ಷ ಅಜ್ಮೀರ್ ಬೆಳ್ಳಿಕಟ್, ಬಸವರಾಜ ಜೆಲ್ಲಿ, ಖಾಲೀದ್, ಗಫೂರ್ ಖಾನ್ ಇತರರಿದ್ದರು. 
ರಾಯಚೂರು

ಸಿದ್ದರಾಮಯ್ಯರಿಂದ ಉತ್ತಮ ಆಡಳಿತ

ನರೇಶ್ ಕುಮಾರ್
ಮುದಗಲ್: ರಾಜ್ಯದಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ ಗೌಡ ಉಪ್ಪಾರನಂದಿಹಾಳ ಹೇಳಿದರು.
ಸಿದ್ದರಾಮಯ್ಯ ಹೆಚ್ಚಿನ ಅವಧಿ ಮುಖ್ಯಮಂತ್ರಿ ದಾಖಲೆ ಬರೆದ ಪ್ರಯುಕ್ತ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು. ಸುಮಾರು 7 ವರ್ಷಗಳ ಕಾಲ ಯಾವುದೇ ಕಪ್ಪುಚುಕ್ಕೆ ಇಲ್ಲದೆ ಅಧಿಕಾರ ನಡೆಸಿದ್ದಾರೆ. ಈ ಬಾರಿ ಐದು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾಗೊಳಿಸಿರುವುದು ಬಡವರ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
ನಂತರ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅರುಣಕುಮಾರ ಯರದಿಹಾಳ, ಯುವ ಘಟಕ ಅಧ್ಯಕ್ಷ ಅಬ್ದುಲ್ ಖದೀರ, ತಾಪಂ ಕೆಡಿಪಿ ಸದಸ್ಯ ರಾಘವೇಂದ್ರ ಕುದರಿ, ಪ್ರಧಾನ ಕಾರ್ಯದರ್ಶಿ ಹುಸೇನ ಬಾಷಾ, ಸಂಗಪ್ಪ ಹಿರೇಮನಿ, ಎಸ್ಸಿ ಘಟಕ ಅಧ್ಯಕ್ಷ ಕೃಷ್ಣ ಚಲುವಾದಿ, ಮಂಜುನಾಥ ಬನ್ನಿಗೋಳಕರ, ಮಹಾಂತೇಶ ಬೋವಿ ಇತರರಿದ್ದರು.