ಮುದಗಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಸಭಾಂಗಣವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು. ಪ್ರಾಚಾರ್ಯ ಸಿದ್ದರಾಮ ಪಾಟೀಲ್, ಪ್ರಮುಖರಾದ ಗಿರಿಮಲ್ಲನಗೌಡರು, ನಾಗಭೂಷಣ, ಚಿದಾನಂದ ದೊರೆ ಇತರರಿದ್ದರು. 
ರಾಯಚೂರು

ಶಿಕ್ಷಣ ವ್ಯವಸ್ಥೆಯಲ್ಲಿ ಕಠಿಣ ಪರಿಶ್ರಮ ಅಗತ್ಯ

ಪ್ರಮುಖ ಮುಖ್ಯಾಂಶಗಳು

  • ಕಠಿಣ ಪರಿಶ್ರಮ

ಶಿಕ್ಷಣ ವ್ಯವಸ್ಥೆಯಲ್ಲಿ ಕಠಿಣ ಪರಿಶ್ರಮ ಅಗತ್ಯ

ಮುದಗಲ್: ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನರನ್ನು ದಿಕ್ಕು ತಪ್ಪಿಸುವ ಜತೆಗೆ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನೂತನ ಸಭಾಂಗಣ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮಕ್ಕಳು ಅಭ್ಯಾಸದ ಕಡೆಗೆ ಗಮನ ಹರಿಸಬೇಕು. ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಕಠಿಣ ಪರಿಶ್ರಮ ಅಗತ್ಯವಿದ್ದು, ವಿದ್ಯಾರ್ಥಿಗಳು ಪಾಲಕರ ಕನಸು ನನಸಾಗಿಸಲು ಮುಂದಾಗಬೇಕು ಎಂದರು.
ಭೂದಾನಿ ಡಾ.ಗುರುರಾಜ ದೇಶಪಾಂಡೆ ಮಾತನಾಡಿ, ದುಶ್ಚಟಗಳಿಂದ ದೂರವಿದ್ದು, ಯುವಕರು ಗುರಿ ಮತ್ತು ಸಾಧನೆಗಳಿಂದ ವಂಚಿತರಾಗದೇ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜು ಸುಧಾರಣಾ ಸಮಿತಿ ಸದಸ್ಯರಾದ ಕರಿಯಪ್ಪ ಯಾದವ್, ಸಣ್ಣ ಸಿದ್ದಯ್ಯ, ನಾಗರಾಜ ತಳವಾರ, ಮಲ್ಲಪ್ಪ ಹೂಗಾರ, ಮಲ್ಲಪ್ಪ ಮಾಟೂರು, ಬಾಬು ಉಪ್ಪಾರ, ಚಂದಾವಲಿಸಾಬ್ ಇತರರಿದ್ದರು.