ಹಂಚಿನಾಳ ಗ್ರಾಮದ ಸಹಿಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರ ಉದ್ಘಾಟಿಸಿದರು. ಸಿಆರ್‌ಪಿ ಜಗದೀಶ, ಎಸ್ಡಿಎಂಸಿ ಪದಾಧಿಕಾರಿಗಳು ಇತರರಿದ್ದರು 
ರಾಯಚೂರು

ಕಲೆ ಅನಾವರಣಕ್ಕೆ ಸಹಕಾರಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಪ್ರತಿಭಾ ಕಾರಂಜಿ
  • ಕಲೆ ಗುರುತಿಸಲು ಸಾಧ್ಯ
  • ಮಕ್ಕಳಲ್ಲಿರುವ ಪ್ರತಿಭೆ

ಕಲೆ ಅನಾವರಣಕ್ಕೆ ಸಹಕಾರಿ

ಮಸ್ಕಿ: ಪ್ರತಿಭಾ ಕಾರಂಜಿಯಿಂದ ಮಕ್ಕಳಲ್ಲಿರುವ ಪ್ರತಿಭೆ, ಕಲೆ ಗುರುತಿಸಲು ಸಾಧ್ಯ ಎಂದು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸಾಬಣ್ಣ ವಗ್ಗರ ಹೇಳಿದರು.
ತಾಲೂಕಿನ ಕೋಳಬಾಳ ಸಮೂಹ ಸಂಪನ್ಮೂಲ ಕೇಂದ್ರದಿಂದ ಹಂಚಿನಾಳ ಸಹಿಪ್ರಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಗುರುತಿಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ.

ಶಿಕ್ಷಕರ ಮಾರ್ಗದರ್ಶನದಲ್ಲಿ ಬೆಳೆದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯುತ್ತಾರೆ ಎಂದರು. ಸಿಆರ್‌ಪಿ ಜಗದೀಶ ಇತರರಿದ್ದರು.