ಜೆಡಿಎಸ್ ಪಕ್ಷದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ  
ರಾಯಚೂರು

ಮುಂದಿನ ಮೈತ್ರಿ ಅಭ್ಯರ್ಥಿ ನಾನೇ

ಮಾನ್ವಿ ಮುಂದಿನ 2028 ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಯಾಗಿ ಸ್ಫರ್ಧಿಸಿ ಗೆಲುವು ಸಾಧಿಸದಿವೆಂದು ಜೆಡಿಎಸ್ ಪಕ್ಷದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾನ್ವಿ ಪ.ಪಂಗಡ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿಯಾಗುವುದಕ್ಕೆ ನನ್ನಗೆ ಪಕ್ಷದ ವರಿಷ್ಠರು ಅವಕಾಶ ನೀಡಿ ಪಕ್ಷವನ್ನು ಸಂಘಟಿಸುವುದಕ್ಕೆ ಸೂಚಿಸಿದ್ದಾರೆ. ಜೆಡಿಎಸ್ ಶಾಸಕನಾಗಿ ಗೇಲುವು ಸಾಧಿಸಿ ಕ್ಷೇತ್ರದಲ್ಲಿನ ಪ್ರತಿ ಗ್ರಾಮದಲ್ಲಿ ಕನಿಷ್ಟ ಮೂರು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿನ ಎಲ್ಲಾ ಸಮುದಾಯಗಳ ಜನರೊಂದಿಗೆ ವಿಶ್ವಾಸದಿಂದ ಕಾರ್ಯನಿರ್ವಹಿಸಿದ್ದೇನೆ.

ಜಿಲ್ಲೆಯಲ್ಲಿ ನಾಲ್ಕು ಸ್ಥಾನ ಬಿಜೆಪಿ ಪಕ್ಷಕ್ಕೆ ಹಾಗೂ ಜೆಡಿಎಸ್ ಪಕ್ಷಕ್ಕೆ ಮೂರು ಸ್ಥಾನಗಳನ್ನು ನೀಡಲಾಗಿದೆ. ಕ್ಷೇತ್ರದ ಜನರ ಒಲವು ನನ್ನ ಮೇಲಿದ್ದು ಬಿಜೆಪಿಯೊಂದಿಗಿನ ಮೈತ್ರಿಯಿಂದ ಸುಲಭವಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಹೆಚ್ಚಿನ ಅಂತರದಿಂದ ಗೇಲವು ಸಾಧಿಸುವ ವಿಶ್ವಾಸವಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಈರಣ್ಣ , ಟಿ.ಮಲ್ಲಿಕಾರ್ಜುನ ಗೌಡ , ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರನಾಯಕ ಇದ್ದರು.