ರಾಯಚೂರಿನ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಂಗಳವಾರ ಭೋವಿ ಅಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿದ್ದ ನಿಗಮದ ವಿವಿಧ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಮುದಾಯದ ಮುಖಂಡರೊಂದಿಗೆ ಸಮಾಲೋಚನಾ ಸಭೆಯನ್ನು ನಿಗಮದ ಅಧ್ಯಕ್ಷ ಎಂ.ರಾಮಪ್ಪ ಉದ್ಘಾಟಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರನಾಯಕ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಎಎಸ್ಪಿ ಕುಮಾರಸ್ವಾಮಿ, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷಿರಾಣಿ, ರಾಜೇಂದ್ರ ಜಲ್ದಾರ, ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿ, ಸಮಾಜದ ಪ್ರಮುಖರಾದ ನಾರಾಯಣಸ್ವಾಮಿ, ಯಲ್ಲಪ್ಪ, ಶಶಿಕಲಾ ಭಿಮರಾಯ್, ತಿಪ್ಪೇಸ್ವಾಮಿ ಇದ್ದರು. 
ರಾಯಚೂರು

ಸಮಾಜದ ಸಮಸ್ಯೆಗಳು ಬಗೆಹರಿಸಲು ಪ್ರಮುಖ ಪಾತ್ರವಹಿಸುವೆ -ಭೋವಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಹೇಳಿಕೆ

ರಾಯಚೂರು ಜಿಲ್ಲೆಗೆ ಆಗಮಿಸಿರುವುದು ಯಾವುದೇ ಜಾತ್ರೆ, ಸಮಾರಂಭ ಅಥವಾ ಆಚರಣೆಗಳಿಗಲ್ಲ. ಸಮಾಜದ

ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಭೋವಿ ಅಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿದ್ದ ನಿಗಮದ ವಿವಿಧ ಯೋಜನೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಮುದಾಯದ ಮುಖಂಡರೊಂದಿಗೆ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದಿಂದ ಎಷ್ಟೆ ಸೌಲಭ್ಯ ಸಿಕ್ಕರೂ ಕೂಡ ಭೋವಿ ಸಮಾಜ ಶೈಕ್ಷಣಿಕವಾಗಿ ಸಬಲರಾಗಬೇಕು. ಶಿಕ್ಷಣದಿಂದ ಮಾತ್ರ ಸಮಾಜದ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಭೆಯಲ್ಲಿ ಚರ್ಚಿಸಲಾಗುವ ಚರ್ಚೆಗಳನ್ನು ಸರಿಯಾಗಿ ಗ್ರಹಿಸಿಕೊಂಡು ಸಮಾಜದ ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಉತ್ತರ ಕರ್ನಾಟಕದ ಜನರು ಅಭಿವೃದ್ಧಿ ನಿಗಮದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ಎಲ್ಲವನ್ನೂ ಬಗೆಹರಿಸುತ್ತೇನೆ ಎಂದು ಭರವಸೆಯನು ನೀಡದೇ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಈಡೇರಿಸಿ. ಉಳಿದ ನಿರೀಕ್ಷೆಗಳನ್ನು ಸರ್ಕಾರದ ಮಟ್ಟದಲ್ಲಿ ಮತ್ತು ನಿಯಮಾನುಸಾರ ಈಡೇರಿಸುವುದಾಗಿ ಭರವಸೆ ನೀಡಿದರು.

ಸರ್ಕಾರ ಎಷ್ಟೆ ಯೋಜನೆಗಳನ್ನು, ಭಾಗ್ಯಗಳನ್ನು ನೀಡಿದರೂ ಕೂಡ ನಾವು ಸಮಾಜದಲ್ಲಿ ಶಿಕ್ಷಣವಂತರಾಗಿ, ಉನ್ನತ ಸ್ಥಾನಕ್ಕೆ ತಲುಪಿದಾಗ ಮಾತ್ರ ಸಬಲರಾಗಲು ಸಾಧ್ಯ, ಸಮಾಜದ ಮಕ್ಕಳು ಶಿಕ್ಷಣವಂತರಾಗುವುದು ಬಹಳ ಮುಖ್ಯವಾದ ಸಂಗತಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರನಾಯಕ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಎಎಸ್ಪಿ ಕುಮಾರಸ್ವಾಮಿ, ಮಹಾನಗರ ಪಾಲಿಕೆ ಉಪ ಆಯುಕ್ತ ಸಂತೋಷಿರಾಣಿ, ರಾಜೇಂದ್ರ ಜಲ್ದಾರ, ನಿಗಮದ ಜಿಲ್ಲಾ ವ್ಯವಸ್ಥಾಪಕ ರವಿ, ಸಮಾಜದ ಪ್ರಮುಖರಾದ ನಾರಾಯಣಸ್ವಾಮಿ, ಯಲ್ಲಪ್ಪ, ಶಶಿಕಲಾ ಭಿಮರಾಯ್, ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಇದ್ದರು.