ಮುದಗಲ್ ಸಮೀಪದ ಖೈರವಾಡಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಸಕ ಮಾನಪ್ಪ ವಜ್ಜಲ್ ಪಠ್ಯಪುಸ್ತಕ-ಸಮವಸ್ತ್ರ ವಿತರಿಸಿದರು.ಸೋಮವಾರ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಿ ಶುಭ ಕೋರಿದರು. ಬಿಇಒ ಸುಜಾತ ಹೂನೂರು, ಲಿಂಗಸುಗೂರು ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಶಿಕ್ಷಕ ವಿಜಯಕುಮಾರ್ ಮೇಟಿ ಇತರರಿದ್ದರು. 
ರಾಯಚೂರು

ದಾಖಲಾತಿ ಹೆಚ್ಚಿಸುವುದು ಎಲ್ಲರ ಕರ್ತವ್ಯ

ಶಾಮಸುಂದರ್ ಕೊಪ್ಪಳಕರ್
ಮುದಗಲ್: ಈಗ ಬಹುತೇಕ ಪಾಲಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದು, ಆಘಾತಕಾರಿ ಬೆಳವಣಿಗೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣದೊಂದಿಗೆ ಅನೇಕ ಸವಲತ್ತುಗಳನ್ನು ಪಡೆಯಬಹುದಾಗಿದೆ ಎಂದು ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಸಮೀಪದ ಖೈರವಾಡಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಾಲಕರು ಸರ್ಕಾರಿ ಶಾಲೆಗಳ ಉಳಿವಿಗೆ ಮಕ್ಕಳನ್ನು ಸೇರಿಸಬೇಕು. ದಾಖಲಾತಿ ಪ್ರಮಾಣ ಹೆಚ್ಚಿಸುವುದು ಎಲ್ಲರ ಆದ್ಯ ಕರ್ತವ್ಯ ವಾಗಿದೆ ಎಂದರು. ಬಿಇಒ ಸುಜಾತ ಹೂನೂರು, ಲಿಂಗಸುಗೂರು ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಶಿಕ್ಷಕ ವಿಜಯಕುಮಾರ್ ಮೇಟಿ ಇತರರಿದ್ದರು.
ಹೂಮಳೆ ಸುರಿದ ಶಿಕ್ಷಕರು: ಜನತಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ನಡೆಯಿತು. ಮಕ್ಕಳಿಗೆ ಶಿಕ್ಷಕರು ಹೂಮಳೆ ಸುರಿಸುವ ಮೂಲಕ ಸ್ವಾಗತಿಸಿದರು. ಶೈಕ್ಷಣಿಕ ವರ್ಷದ ಶುಭಾರಂಭಕ್ಕಾಗಿ ಸರಸ್ವತಿ ದೇವಿಗೆ ಪೂಜೆ ಸಲ್ಲಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.
ಪ್ರಭಾರ ಮುಖ್ಯಶಿಕ್ಷಕ ಮೌನೇಶ್ ಎಂ., ಸಹ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಶಾಲಾ ಆರಂಭ ಹಾಗೂ ಶಾಲಾ ದಾಖಲಾತಿ ಜಾಥಾಕ್ಕೆ ಚಾಲನೆ ನೀಡಲಾಯಿತು.