ಅರಕೇರಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಸಂಘದ ಸಮಾರೋಪ ಕಾರ್ಯಕ್ರಮವನ್ನು ಪ್ರಾಚಾರ್ಯ ಮಲ್ಲಪ್ಪ ಸರ್ಜಾಪುರ್ ಉದ್ಘಾಟಿಸಿದರು. ಉಪನ್ಯಾಸಕರಾದ ನಿಜಾನಂದ ರೆಡ್ಡಿ, ಮಧು, ವೆಂಕಟೇಶ ಪವಾರ್ ಇದ್ದರು. 
ರಾಯಚೂರು

ಪಾಲಿಟೆಕ್ನಿಕ್ ಕೋರ್ಸ್‌ನಿಂದ ಉದ್ಯೋಗ ಅವಕಾಶ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಉದ್ಯೋಗ ಅವಕಾಶ

ಪಾಲಿಟೆಕ್ನಿಕ್ ಕೋರ್ಸ್‌ನಿಂದ ಉದ್ಯೋಗ ಅವಕಾಶ

ಅರಕೇರಾ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪಾಲಿಟೆಕ್ನಿಕ್ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಾಚಾರ್ಯ ಮಲ್ಲಪ್ಪ ಸರ್ಜಾಪುರ ಹೇಳಿದರು.
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಸಂಘದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ನಂತರ ತಾಂತ್ರಿಕ ವಿದ್ಯಾಭ್ಯಾಸದ ಕುರಿತು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಪಾಲಿಟೆಕ್ನಿಕ್ ಕೋರ್ಸ್ ಉತ್ತಮ ಉದ್ಯೋಗ ಅವಕಾಶಗಳನ್ನು ಒದಗಿಸುತ್ತಿದೆ. ಪಾಲಿಟೆಕ್ನಿಕ್ ಶಿಕ್ಷಣದಲ್ಲಿ ಹೆಚ್ಚು ಪ್ರಾಯೋಗಿಕ ತರಬೇತಿ ನೀಡುವುದರಿಂದ ಉದ್ಯೋಗಕ್ಕೆ ಅನುಕೂಲವಾಗುತ್ತದೆ ಎಂದರು.
ಉಪನ್ಯಾಸಕ ನಿಜಾನಂದ ರೆಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪಾಲಿಟೆಕ್ನಿಕ್ ಕೋರ್ಸ್ ವಿಶೇಷವಾಗಿ ಉಪಯುಕ್ತವಾಗಿದ್ದು, ಸಮಯ ಮತ್ತು ಹಣ ಉಳಿಸಬಹುದು. ಸರ್ಕಾರ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡಿ ಪಾಲಿಟೆಕ್ನಿಕ್ ಶಿಕ್ಷಣದ ಮಹತ್ವ ಹೆಚ್ಚಿಸಿದೆ ಎಂದು ತಿಳಿಸಿದರು. ಉಪನ್ಯಾಸಕರಾದ ಮಧು, ವೆಂಕಟೇಶ ಪವಾರ್ ಇತರರಿದ್ದರು.