ದೇವದುರ್ಗದ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಗಣ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 
ರಾಯಚೂರು

ಕಸಾಪ ಕಾರ್ಯಚಟುವಟಿಕೆ ಶ್ಲಾಘನೀಯ

ದೇವದುರ್ಗ: ಕನ್ನಡ ನಾಡು, ನುಡಿ, ಸಾಹಿತ್ಯ, ಕಲೆ ಉಳಿಸಿ ಬೆಳೆಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ ತನ್ನದೇ ಸೇವೆ ಸಲ್ಲಿಸುತ್ತಿದ್ದು, ಕಾರ್ಯಚಟುವಟಿಕೆಗಳು ಶ್ಲಾಘನೀಯ ಎಂದು ಪ್ರಾಚಾರ್ಯ ರಂಗಪ್ಪ ನಾಯಕ ಹೇಳಿದರು. 
ಪಟ್ಟಣದ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕಸಾಪದಿಂದ ಆಯೋಜಿಸಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. 
ಸಾಹಿತ್ಯಕ್ಕೆ ಕಸಾಪ ನೂರು ವರ್ಷಗಳಿಂದ ಸಲ್ಲಿಸುತ್ತಿರುವ ಸೇವೆ ಅವಿಸ್ಮರಣೀಯ. ವಿದ್ಯಾರ್ಥಿಗಳು ಸಾಹಿತ್ಯ ಆಸಕ್ತಿ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವಂಥ ಹವ್ಯಾಸ ರೂಢಿಸಿಕೊಳ್ಳಬೇಕು. ಸಾಹಿತ್ಯ ಪುಸ್ತಕಗಳು, ರಾಷ್ಟ್ರ ನಾಯಕರ ಜೀವನ ಚರಿತ್ರೆ ಸಾಧು-ಸಂತರ ಕೊಡುಗೆಗಳ ಬಗ್ಗೆ ಅಧ್ಯಯನ ಮಾಡಬೇಕು ಎಂದರು. 
ನಂತರ ಪ್ರತಿಭಾವಂತರನ್ನು ಸನ್ಮಾನಿಸಿ ಪ್ರಮಾಣಪತ್ರ,  ಪದಕ ನೀಡಲಾಯಿತು. ಕಸಾಪ ತಾಲೂಕು ಅಧ್ಯಕ್ಷ ಎಚ್.ಶಿವರಾಜ, ಪ್ರಮುಖರಾದ ಮಹೇಂದ್ರ ಮೇತ್ರಿ, ಹನುಮಯ್ಯ ಪಿಲಿಗೊಂಡ, ಮಾನಶಯ್ಯ, ಲಾಲ್ ಅಹ್ಮದ್‌ಸಾಬ್, ನೀಲಕ್ಕ ಬಿರಾದಾರ್, ಸಾವಿತ್ರಿ, ಮಧು, ಕಸ್ತೂರಿಕುಮಾರಿ ಇತರರಿದ್ದರು.